2
Jacquelline Fernandez: ಖ್ಯಾತ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ತಾಯಿ ಕಿಮ್ ಫರ್ನಾಂಡಿಸ್ ಭಾನುವಾರ (ಇಂದು, ಎ.6)ಪಾರ್ಶ್ವವಾಯುವಿಗೆ ತುತ್ತಾಗಿ ನಿಧನರಾಗಿದ್ದಾರೆ.
ಮಾ.24 ರಂದು ಕಿಮ್ ಫರ್ನಾಂಡಿಸ್ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದರು. ಆದರೆ ಭಾನುವಾರ ಅವರು ಕೊನೆಯುಸಿರೆಳೆದಿದ್ದಾರೆ.
ಮುಂಬೈನ ಲೀಲಾವತಿ ಆಸ್ಪತ್ರೆಗೆ ಕಿಮ್ ಅವರು ಸ್ಥಳಾಂತರ ಮಾಡಲಾಗಿತ್ತು. ನಂತರ ಅಲ್ಲಿಗೆ ನಟಿ ಜಾಕ್ವೆಲಿನ್ ಮತ್ತು ಆಕೆಯ ತಂದೆ ಎಲ್ರಾಯ್ ಫೆರ್ನಾಂಡಿಸ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಸಲ್ಮಾನ್ ಖಾನ್ ಕೂಡಾ ಆಸ್ಪತ್ರೆಗೆ ಭೇಟಿ ನೀಡಿದ್ದರು.
ಮಾ.26 ರಂದು ಗುವಾಹಟಿಯಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಐಪಿಎಲ್ 2025ರ ಪಂದ್ಯದಲ್ಲಿ ಜಾಕ್ವೆಲಿನ್ ಡ್ಯಾನ್ ಮಾಡಬೇಕಿತ್ತು. ಆದರೆ ತಾಯಿ ಅನಾರೋಗ್ಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಿಂದ ಹೊರಗುಳಿದಿದ್ದರು.
