9
Bollywood: ಪವಿತ್ರಾ ರಿಶ್ತಾ ಧಾರಾವಾಹಿಯಲ್ಲಿ ವರ್ಷಾ ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದ ನಟಿ ಪ್ರಿಯಾ ಮರಾಠೆ ಅವರು ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ.
38 ವಯಸ್ಸಿನ ನಟಿ ಪ್ರಿಯಾ ಎರಡು ವರ್ಷಗಳಿಗೂ ಹೆಚ್ಚು ಕಾಲ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅವರು ಮೀರಾ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಸುಕಿನ 4 ಗಂಟೆಗೆ ನಿಧನರಾಗಿದ್ದಾರೆ. ಪ್ರಿಯಾ ಅವರು ಪತಿ, ನಟ ಶಾಂತನು ಮೋಘೆ ಅವರನ್ನು ಅಗಲಿದ್ದಾರೆ.
ಪ್ರಿಯಾ ಅವರು ‘ಯಾ ಸುಖನೋ ಯಾ’ ಧಾರವಾಹಿ ಮೂಲಕ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದರು. ನಂತರ ‘ಚಾರ್ ದಿವಸ್ ಸಸುಚೆ’ ಸೇರಿದಂತೆ ಹಲವು ಮರಾಠಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
