5
Death: ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸೆಲ್ಫಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ.
ಸುಬ್ರಹ್ಮಣ್ಯ (38) ಮೃತರಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುಬ್ರಹ್ಮಣ್ಯ ಜನ ಫೈನಾನ್ಸ್ ಬ್ಯಾಂಕಿನಲ್ಲಿ 5 ಲಕ್ಷ ಸಾಲ ಪಡೆದುಕೊಂಡಿದ್ದು, ಕಂತು ಡ್ಯೂ ಇದ್ದ ಕಾರಣ ಇತ್ತೀಚಿಗೆ ಒಂದು ನೋಟಿಸ್ ಬಂದಿರುತ್ತದೆ ಹಾಗೂ ಮನೆ ಜಪ್ತಿ ಮಾಡಲಾಗುವುದು ಎಂದು ಬೆದರಿಕೆ ಹಾಕಿರುತ್ತಾರೆ. ಇದರಿಂದ ಮನ ನೊಂದ ಸುಬ್ರಹ್ಮಣ್ಯ ಸಾವಿಗೆ ಶರಣಾಗಿದ್ದು, ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ;Crime: ತೋಟದ ಮನೆಯಲ್ಲಿ ಗೃಹಿಣಿಯ ಕೊಲೆ
