4
Neriya: ನೆರಿಯ ( neriya) ಗ್ರಾಮದ ಅಕ್ಕೋಳೆ ಎಂಬಲ್ಲಿ ಹಾಡಹಾಗಲೇ ಕಳ್ಳರು ಮನೆಯ ಗೋದ್ರೆಜ್ ನ ಬಾಗಿಲು ತೆರೆದು ರೂ. 3,12,000/-ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ಫೆ.19 ರಂದು ನಡೆದಿದೆ.
ಫಾತಿಮತ್ ರಂಝೀನ್ ರವರ ದೂರಿನಂತೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫೆ. 19 ರಂದು ಬೆಳಿಗ್ಗೆ ನೆರಿಯ ಗ್ರಾಮದ ಅಕ್ಕೋಳೆ ಎಂಬಲ್ಲಿರುವ ಮನೆಯಲ್ಲಿ, ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಮಯದಲ್ಲಿ ಗಾಡ್ರೆಜ್ ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕಾಣೆಯಾಗಿರುತ್ತದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
