3
Siddaramaiah:ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ 2025-26ನೇ ಬಜೆಟ್ ಮಂಡನೆಯಲ್ಲಿ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ವಿಶೇಷ ಸೌಲಭ್ಯ ಹಾಗೂ ನೆರವುಗಳ ಘೋಷಣೆ ಮಾಡಿದರು.
ಕಾರ್ಮಿಕರ ಮಕ್ಕಳಿಗಾಗಿ 6ನೇ ತರಗತಿಯಿಂದ 12ನೇ ತರಗತಿಯವರಗೆ ಶಾಲೆಗಳನ್ನು ನಿರ್ಮಿಸಿ ಅವುಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಶೈಕ್ಷಣಿಕ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
