5
University: ಸರಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯ ಉಪಸಮಿತಿ ತೀರ್ಮಾನ ಮಾಡಿದೆ. ಬೀದರ್ ವಿಶ್ವವಿದ್ಯಾಲಯ ಹೊರತುಪಡಿಸಿ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯ ಸೇರಿ ಎಲ್ಲಾ ಒಂಭತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನ ಮಾಡಲಾಗಿದೆ.
ಯಾವುದೇ ವಿಶ್ವವಿದ್ಯಾಲಯ ನಡೆಯಲು ಕಾಲೇಜುಗಳ ಶುಲ್ಕ ಮುಖ್ಯ. ಹಾಗಾಗಿ ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿರುವ ಕಾರಣ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಹಾಗಾಗಿ ಇದನ್ನು ಉಳಿಸಿಕೊಳ್ಳುವ ಕುರಿತು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಯಾವ ಯಾವ ವಿಶ್ವವಿದ್ಯಾಲಯ ಮುಚ್ಚಲು ನಿರ್ಧಾರ?
ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿವಿ.
