Home » Ganesha Procession: ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ: ಹಿಂದೂ ಮುಖಂಡರ ತೀರ್ಮಾನ

Ganesha Procession: ನಾಳೆ ಮದ್ದೂರು ಸ್ವಯಂ ಪ್ರೇರಿತ ಬಂದ್‌ಗೆ ಕರೆ: ಹಿಂದೂ ಮುಖಂಡರ ತೀರ್ಮಾನ

0 comments

Ganesha Procession: ಮದ್ದೂರಿನಲ್ಲಿ ಗಣೇಶ ವಿಸರ್ಜನೆ (Ganesha Procession) ಮೆರವಣಿಗೆ ವೇಳೆ ಕಲ್ಲು (Stone Pelting) ನಡೆಸಿದ್ದನ್ನು ವಿರೋಧಿಸಿ ಹಿಂದೂ ಮುಖಂಡರು ನಾಳೆ ಮದ್ದೂರು ಸ್ವಯಂ ಘೋಷಿತ ಬಂದ್‌ಗೆ ಕರೆ ನೀಡಿದ್ದಾರೆ. ಅಲ್ಲದೇ ಬುಧವಾರ ಮದ್ದೂರು ತಾಲೂಕಿನ ಎಲ್ಲಾ ಗಣೇಶ ಮೂರ್ತಿಗಳನ್ನ ಮದ್ದೂರು ಪಟ್ಟಣದಲ್ಲಿ ತಂದು ಮೆರವಣಿಗೆ ಮಾಡಿ ವಿಸರ್ಜನೆ ಮಾಡಲು ತೀರ್ಮಾನಿಸಿದ್ದಾರೆ. ಡಿಜೆ ಸಮೇತ ಸಾಮೂಹಿಕ ಗಣೇಶ ವಿಸರ್ಜನೆ ನಡೆಸಲು ಕರೆ ನೀಡಲಾಗಿದೆ.

ಇದನ್ನೂ ಓದಿ:Dharmasthala: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಬಗ್ಗೆ ಮಾರ್ಮಿಕ ಭವಿಷ್ಯ ನುಡಿದ ಕೋಡಿ ಶ್ರೀ!

ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿರೋದು ಪೂರ್ವ ನಿಯೋಜಿತ. ಮಸೀದಿ ಕಡೆಯಿಂದ ಕಲ್ಲು ತೂರಾಟ ಮಾಡಲಾಗಿದೆ. ಕೂಡಲೇ ಮಸೀದಿಯ ಧರ್ಮಗುರು ಬಂಧನ ಮಾಡುವಂತೆ ಹಿಂದೂ ಕಾರ್ಯಕರ್ತರು ಮನವಿ ಮಾಡಿದ್ದಾರೆ. ಅಲ್ಲದೇ ಮಸೀದಿ ಸೀಜ್ ಮಾಡಿ ಎಂದು ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

You may also like