Home » NEET Exam: ಕೇಂದ್ರದ NEET ಪರೀಕ್ಷೆ ರದ್ಧು: ನಿರ್ಣಯಕ್ಕೆ ರಾಜ್ಯದ ಉಭಯ ಸದನಗಳಲ್ಲೂ ಅಂಗೀಕಾರ !

NEET Exam: ಕೇಂದ್ರದ NEET ಪರೀಕ್ಷೆ ರದ್ಧು: ನಿರ್ಣಯಕ್ಕೆ ರಾಜ್ಯದ ಉಭಯ ಸದನಗಳಲ್ಲೂ ಅಂಗೀಕಾರ !

0 comments
NEET Exam

NEET Exam: ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧವಾಗಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು. ಈ ನಿರ್ಣಯಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ ಗಳಲ್ಲಿ ಅಂಗೀಕಾರ ದೊರೆತಿದೆ.

ರಾಜ್ಯ ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ನೀಟ್ ಪರೀಕ್ಷೆ ರದ್ದುಗೊಳಿಸುವ ಪ್ರಮುಖ ನಿರ್ಣಯವನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಯಿತು. ನೀಟ್ ಪರೀಕ್ಷೆಯನ್ನು ರಾಜ್ಯದಲ್ಲಿ ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು. ಈ ನಿರ್ಣಯಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಆ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳು ಹೋರಾಟಕ್ಕೆ ಇಳಿದಿವೆ.

ಇದೀಗ ಕೇಂದ್ರ ಮಾಡುತ್ತಿರುವ ನೀಟ್ ಪರೀಕ್ಷಾ ವ್ಯವಸ್ಥೆಯಿಂದ ಕರ್ನಾಟಕದ ಗ್ರಾಮೀಣ ಭಾಗದ ಬಡ ಮಕಳಿಗೆ ಹಿನ್ನಡೆಯಾಗುತ್ತಿದೆ. ಅವರ ವೈದ್ಯಕೀಯ ಶಿಕ್ಷಣಗಳ ಅವಕಾಶಗಳ ಮೇಲೆ ಭಾರಿ ಹೊಡೆತ ಬೀಳುತ್ತಿದೆ. ರಾಜ್ಯದ ವೈದ್ಯಕೀಯ ಕಾಲೇಜುಗಳ ಹಕ್ಕನ್ನು ಕೇಂದ್ರದ ನೀಟ್ ಪರೀಕ್ಷಾ ವ್ಯವಸ್ಥೆ ಕಸಿದುಕೊಳ್ಳುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕನ್ನು ಕೇಂದ್ರ ಕಸಿದುಕೊಳ್ಳುತ್ತಿದೆ. ಹೀಗಾಗಿ ನೀಟ್ ಪರೀಕ್ಷಾ ವ್ಯವಸ್ಥೆ ರದ್ದುಪಡಿಸಬೇಕು ಎಂದು ಅವರು ವಿಧಾನಸಭೆಯಲ್ಲಿ ಆಗ್ರಹಿಸಿದರು.

7th Pay Commission: ಸರ್ಕಾರಿ ನೌಕರರೇ ಆಗಸ್ಟ್ ನಿಂದ ಹೆಚ್ಚಾಗೋ ವೇತನವನ್ನು ಈ ರೀತಿ ಚೆಕ್ ಮಾಡಿಕೊಳ್ಳಿ !!

ಈ ಸಂಬಂಧಿತ ಮಸೂದೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನಪರಿಷತ್ತಿನಲ್ಲಿ ಮಂಡಿಸಿದರು. ಅದು ವಿಧಾನ ಪರಿಷತ್ತಿನಲ್ಲೂ ಅಂಗೀಕಾರವಾಯಿತು. ನೀಟ್ ಪರೀಕ್ಷಾ ವ್ಯವಸ್ಥೆಯು ಬಡ ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಅವಕಾಶಗಳನ್ನು ಕಸಿದುಕೊಂಡು, ರಾಜ್ಯ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆಯುವ ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಜತೆಗೆ ಕೇಂದ್ರ ನಡೆಸುವ NEET ಪರೀಕ್ಷೆಯಲ್ಲಿ ಪದೇ ಪದೇ ನಡೆಯುತ್ತಿರುವ ಅಕ್ರಮಗಳನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು. ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆ, 2019 (2019 ರ ಕೇಂದ್ರ ಕಾಯಿದೆ 30) ಇದರಿಂದ ರಾಷ್ಟ್ರೀಯ ಮಟ್ಟದಲ್ಲಿ NEET ವ್ಯವಸ್ಥೆಯನ್ನು ಕೈಬಿಡಲಾಗಿದೆ, ”ಎಂದು ನಿರ್ಣಯವನ್ನು ಓದಿ ಅಂಗೀಕರಿಸಲಾಯಿತು.

ಈ ಬಗ್ಗೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು ಮತ್ತು ಸಿಇಟಿ ಆಧಾರದ ಮೇಲೆ ವೈದ್ಯಕೀಯ ಪ್ರವೇಶವನ್ನು ಒದಗಿಸಬೇಕು ಎಂದು ವಿಧಾನ ಪರಿಷತ್ತು ಸರ್ವಾನುಮತದಿಂದ ಅಂಗೀಕರಿಸಿದೆ. ನಿನ್ನೆ ಬುಧವಾರ ಪಶ್ಚಿಮ ಬಂಗಾಳ ವಿಧಾನಸಭೆಯು NEET ರದ್ದುಗೊಳಿಸಲು ಮತ್ತು ವೈದ್ಯಕೀಯ ಆಕಾಂಕ್ಷಿಗಳಿಗೆ ಹೊಸ ಪ್ರವೇಶ ಪರೀಕ್ಷೆಯನ್ನು ತರುವ ನಿರ್ಣಯವನ್ನು ಅಂಗೀಕರಿಸಿಟ್ಟು. ಜತೆಗೆ ತಮಿಳುನಾಡು, ಪಶ್ಚಿಮ ಬಂಗಾಳ, ನಂತರ ನೀಟ್ ಪರೀಕ್ಷೆ ರದ್ದುಪಡಿಸಿದ ರಾಜ್ಯಗಳ ಜೊತೆಗೆ ಮೂರನೇ ರಾಜ್ಯ ಕರ್ನಾಟಕವಾಗಿದೆ. ನಮ್ಮ ರಾಜ್ಯದಲ್ಲಿ ಒಟ್ಟು 10,945 ಸೀಟುಗಳಿದ್ದು ಅದರಲ್ಲಿ 3,200 ಸರ್ಕಾರಿ ವೈದ್ಯಕೀಯ ಸೀಟುಗಳು ಮತ್ತು 7,745 ಸೀಟುಗಳು ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕೆ ಲಭ್ಯವಿದೆ.

Parliament Session: ‘ವಂದೇ ಭಾರತ್’ ಗೆ ಕೊಡುವ ಮಹತ್ವವನ್ನು ಸರ್ಕಾರ ಬಡವರ ರೈಲುಗಳಿಗೇಕೆ ಕೊಡುತ್ತಿಲ್ಲ ?! ರೈಲ್ವೆ ಸಚಿವರು ಹೇಳಿದ್ದಿಷ್ಟು

You may also like

Leave a Comment