Vitla: ಕುದ್ದುಪದವು-ಪೆರುವಾಯಿ ಸಂಪರ್ಕ ರಸ್ತೆಯ ಆದಾಳ ಸಮೀಪ ಕಾರು ಮತ್ತು ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಘಟನೆ ನಡೆದಿದೆ. ದ್ವಿಚಕ್ರ ವಾಹನ ಹಿಂಬದಿ ಸವಾರನಿಗೆ ಗಂಭೀರವಾಗಿ ಗಾಯವಾಗಿದ ಎಂದು ವರದಿಯಾಗಿದೆ. ದ್ವಿಚಕ್ರ ವಾಹನದ ಬಲಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಾಗೂ ಕಾರಿನ ಮುಂಭಾಗಕ್ಕೂ ಹಾನಿಯಾಗಿರುವ ಕುರಿತು ವರದಿಯಾಗಿದೆ.
ಪೆರುವಾಯಿ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಕುದ್ದುಪದವು ಕಡೆಯಿಂದ ಸಾಗುತ್ತಿದ್ದ ಕಾರು ಆದಾಳ ಎಂಬಲ್ಲಿ ಡಿಕ್ಕಿ ಹೊಡೆದಿದೆ.
ಕಾರಿನ ಚಾಲಕ ಹಾಗೂ ಇತರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದ್ವಿಚಕ್ರ ವಾಹನದ ಹಿಂಬದಿ ಸವಾರನ ಕಾಲಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಸ್ಥಳೀಯರು ಹೇಳಿರುವ ಕುರಿತು ವರದಿಯಾಗಿದೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬಂದಿದ್ದು, ಕ್ರಮ ಕೈಗೊಂಡಿದ್ದಾರೆ.
