Home » Vijay devarakonda: ನಟ ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು!

Vijay devarakonda: ನಟ ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು!

0 comments
Vijay Devarakonda

Vijay devarakonda: ತೆಲುಗು ನಟ ವಿಜಯ್ ದೇವರಕೊಂಡ (Vijay devarakonda) ವಿರುದ್ಧ, ಬುಡಕಟ್ಟು ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಮೇಲೆ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

 

ರೆಟ್ರೋ ಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ವಿಜಯ್ ದೇವರಕೊಂಡ ಬುಡಕಟ್ಟು ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯ ಅಧ್ಯಕ್ಷ ನೆನವತ್ ಅಶೋಕ್ ಕುಮಾರ್ ನಾಯಕ್ ದೂರು ದಾಖಲಿಸಿದ್ದಾರೆ. ಸೈಬರಾಬಾದ್‌ನ ರಾಯದುರ್ಗಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

 

ಇದನ್ನೂ ಓದಿ: Udupi: ಮೀಶೋ ಹೆಸರಿನಲ್ಲಿ ಮಹಿಳೆಗೆ ಆನ್ಲೈನ್ ವಂಚನೆ!

You may also like