Home » Belthangady : ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ತಡೆದು ನಿಂದಿಸಿದ ಆರೋಪ- ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

Belthangady : ಉಜಿರೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ತಡೆದು ನಿಂದಿಸಿದ ಆರೋಪ- ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

0 comments

Belthangady : ರಾಮೋತ್ಸವ ಕಾರ್ಯಕ್ರಮಕ್ಕೆ ಬಂದ ಪುನೀತ್ ಕೆರೆಹಳ್ಳಿಯನ್ನು ಉಜಿರೆಯಲ್ಲಿ ನಡೆದ ನಿಲ್ಲಿಸಿದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರ ಬೆಂಬಲಿಗರ ಮೇಲೆ ಪ್ರಕರಣ ದಾಖಲಾಗಿದೆ.

ಹೌದು, ಬೆಳ್ತಂಗಡಿ ಪೊಲೀಸ್ ಠಾಣೆಯ ಎಸ್ಸೈ ಮುರಳೀಧರ ನಾಯ್ಕ್ ಕೆ.ಜಿ. ಅವರ ದೂರಿನಂತೆ ಪ್ರಕರಣ ದಾಖಲಿಸಲಾಗಿದ್ದು, ಉಜಿರೆ ನಿವಾಸಿಗಳಾದ ಅನಿಲ್ ಅಂತರ, ಮನೋಜ್ ಕುಂಜರ್ಪ, ಪ್ರಜ್ವಲ್ ಗೌಡ, ಪ್ರಭಾಕರ, ಗಣೇಶ್ ಹಾಗೂ ಇತರರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಪುನೀತ್ ಕೇರೆಹಳ್ಳಿ ಉಜಿರೆಗೆ ಬಂದರೆ ಉಜಿರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಶಾಂತಿ ಭಂಗ ಉಂಟು ಮಾಡುವ ಸಾಧ್ಯತೆ ಇದ್ದ ಕಾರಣ ಸಾರ್ವಜನಿಕ ಹಿತದೃಷ್ಟಿಯಿಂದ ಆತ ದ.ಕ. ಜಿಲ್ಲೆಯ ಸರಹದ್ದಿನೊಳಗೆ ಪ್ರವೇಶಿಸದಂತೆ ಕಲಂ163 ಬಿ.ಎನ್.ಎಸ್ 2023 ರಂತೆ ನಿರ್ಬಂಧ ವಿಧಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಆದೇಶವನ್ನು ಉಲ್ಲಂಘಿಸಿ ಶನಿವಾರ ಸಂಜೆಯ ವೇಳೆ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಬಳಿ ಸಾರ್ವಜನಿಕ ರಸ್ತೆಗೆ ಪುನೀತ್ ಆಗಮಿಸಿದ್ದರು. ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿಯ ಬೆಂಬಲಿಗರು ತಡೆದು ಪುನೀತ್ ಕೇರೆಹಳ್ಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಸುಗಮ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

You may also like