Caste Survey : ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ನಡೆಸಲಾಗುತ್ತಿರುವ ಜಾತಿ ಸಮೀಕ್ಷೆಯನ್ನು ಮತ್ತೆ ಒಂದು ದಿನ ವಿಸ್ತರಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.
ಹೌದು, ರಾಜ್ಯಾದ್ಯಂತ ಶುಕ್ರವಾರದ ವೇಳೆಗೆ ಶೇ.95.20 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಆದರೆ, ಶೇ.85.72 ರಷ್ಟು ಜನರ ಗಣತಿಯ ಅಂಕಿ-ಅಂಶ ಮಾತ್ರ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಭಾನುವಾರವೂ ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ.
ಅಂದಹಾಗೆ ಈ ಹಿಂದೆ ಅಕ್ಟೋಬರ್ 6ರ ತನಕ ಜಾತಿಗಣತಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ನಿರೀಕ್ಷಿಸಿದಂತೆ ರಾಜ್ಯಾದ್ಯಂತ ಜಾತಿ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅದನ್ನು ಅಕ್ಟೋಬರ್ 17ರ ತನಕ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಜನಸಂಖ್ಯೆಯ ಗಣತಿ ಆಗಿಲ್ಲ. ಹೀಗಾಗಿ ಅ.19 ರಂದು ಭಾನುವಾರವೂ ಸಮೀಕ್ಷೆ ಮುಂದುವರೆಸಲು ತಿಳಿಸಿದ್ದು, ಭಾನುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಮೀಕ್ಷೆಯನ್ನು ಮುಂದುವರೆಸಬೇಕೇ ಅಥವಾ ಮುಕ್ತಾಯಗೊಳಿಸಬೇಕೇ ಎಂಬ ಕುರಿತು ನಿರ್ಧಾರವಾಗಲಿದೆ.
ಇನ್ನೂ ರಾಜ್ಯಾದ್ಯಂತ ಒಟ್ಟು 1,48,14, 286 ಕುಟುಂಬಗಳ ಸಮೀಕ್ಷೆ ಗುರಿ ನೀಡಲಾಗಿತ್ತು. ಈ ಪೈಕಿ ಶುಕ್ರವಾರ 1.62 ಲಕ್ಷ ಕುಟುಂಬಗಳ ಸಮೀಕ್ಷೆ ಪೂರ್ಣ ಗೊಂಡಿದ್ದು, ಒಟ್ಟು 1.41 ಕೋಟಿ ಕುಟುಂಬಗಳ ಸಮೀಕ್ಷೆಪೂರ್ಣಗೊಂಡಿದೆ.
