1
Yoga: ವಿಶ್ವಸಂಸ್ಥೆಯು ಜೂನ್ 21 ಅಂತರಾಷ್ಟ್ರೀಯ ಯೋಗ ದಿನ ಎಂದು ಘೋಷಿಸಿದ್ದು, ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಈ ಬಾರಿ ಯೋಗ ದಿನವನ್ನು ಆಚರಿಸುವುದು ಕಡ್ಡಾಯವಾಗಿದೆ.

ಶಿಕ್ಷಣ ಇಲಾಖೆ ವ್ಯಾಪ್ತಿಯ ಇಲ್ಲ ಸರ್ಕಾರಿ ಖಾಸಗಿ ಅನುದಾನಿತ ಅನುದಾನ ರಹಿತ ಪ್ರಥಮ ದರ್ಜೆ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಯೋಗದ ಮಹತ್ವದ ಕುರಿತಾಗಿ ಅರಿವು ಮೂಡಿಸಬೇಕೆಂದು ಶಿಕ್ಷಣ ಇಲಾಖೆಯ ಸೂಚಿಸಿದೆ.
