Home » Channapattana By Election: ಮೈತ್ರಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ಕಣಕ್ಕೆ?!

Channapattana By Election: ಮೈತ್ರಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ಕಣಕ್ಕೆ?!

0 comments
Channapattana By Election

Channapattana By Election: ರಾಜ್ಯದಲ್ಲಿ ಬೈ ಎಲೆಕ್ಷನ್ ಕಾವು ಜೋರಾಗಿದೆ. ಅದರಲ್ಲೂ ಹೈವೋಲ್ಟೇಜ್ ಕ್ಷೇತ್ರವಾದ ಚನ್ನಪಟ್ಟಣದಂತೂ ಹೇಳತಿರದು. ಒಂದೆಡೆ ಕಾಂಗ್ರೆಸ್ ಗೆ ಇದು ಪ್ರತಿಷ್ಠೆಯ ಕ್ಷೇತ್ರವಾದರೆ ಬಿಜೆಪಿ
-ಜೆಡಿಎಸ್(BJP-JDS) ದೋಸ್ತಿಗಳಿಗೂ ಅಷ್ಟೇ ಮುಖ್ಯವಾದುದಾಗಿದೆ. ಇಷ್ಟಾದರೂ ಯಾವ ಪಕ್ಷಗಳು ತಮ್ಮ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ. ಕಾಂಗ್ರೆಸ್ ನಲ್ಲಿ ಡಿಕೆಶಿ ನಾನೇ ಅಭ್ಯರ್ಥಿ ಅಂದೋರು ಈಗ ಸುಮ್ಮನಾಗಿದ್ದಾರೆ. ಇತ್ತ ಸಿ ಪಿ ಯೋಗೇಶ್ವರ್ ಮೈತ್ರಿ ಪಕ್ಷಗಳಿಂದ ನನಗೆ ಟಿಕೆಟ್ ಅನ್ನುತ್ತಿದ್ದವರೂ ಹೈಕಮಾಂಡ್ ಹಾಕಿದ ಗುಟುರಿಗೆ ಬಾಯಿ ಮುಚ್ಚಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್(Congress) ಗಿಂತಲೂ ಮೈತ್ರಿ ಅಭ್ಯರ್ಥಿ ಮೇಲೆ ಜನರ ಕಣ್ಣು ನೆಟ್ಟಿದೆ. ಈ ಬೆನ್ನಲ್ಲೇ ಮೈಸೂರು ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ(Pratap Simha) ಅವರನ್ನು ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣದಿಂದ ಕಣಕ್ಕಿಳಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಹೌದು, ಚನ್ನಪಟ್ಟಣ(Channapattana)ದ ಕಡೆಯೇ ಜನರ ಚಿತ್ತ ನೆಟ್ಟಿದೆ. ಇದನ್ನು ಜಿದ್ದಾಗಿ ಪರಿಗಣಿಸಿರುವ ಕಾಂಗ್ರೆಸ್ ಹಾಗೂ ಮೈತ್ರಿ ದೋಸ್ತಿಗಳು ಗೆಲ್ಲಲೇ ಬೇಕೆಂದು ಪಣತೊಟ್ಟಿವೆ. ಆದರೀಗ ದೋಸ್ತಿಗಳಾದ BJP-JDS ನಲ್ಲೇ ಕ್ಷೇತ್ರ ಯಾರಿಗೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಇಲ್ಲಿ ಸ್ಪರ್ಧೆ ಮಾಡಲಿರುವ ಅಭ್ಯರ್ಥಿ ಬಗ್ಗೆ ತೀವ್ರ ಕುತೂಹಲ ಕೆರಳಿದ್ದು, ನಿಖಿಲ್ ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್ ಹೆರು ಕೇಳಿಬಂದಿತ್ತು. ಅದರೆ, ಇದೀಗ ಇವರಿಬ್ಬರನ್ನೂ ಬದಿಗಿರಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುಳಿವು ಲಭ್ಯವಾಗಿದೆ.

ಅಂದಹಾಗೆ ಜೆಡಿಎಸ್‌ನೊಂದಿಗೆ ಪ್ರತಾಪ್‌ಸಿಂಹ ಉತ್ತಮ ಒಡನಾಟವನ್ನೇ ಹೊಂದಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ-ಜೆಡಿಸ್ ಮೈತ್ರಿ ಸುಳಿವು ಸಿಗುತ್ತಿದ್ದಂತೆಯೇ ಮೈಸೂರು-ಕೊಡಲು ಲೋಕಸಭಾ ಸಂಸದ ಪ್ರತಾಪ್ ಸಿಂಹ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬಳಿ ಹೋಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದರು. ಹೆಚ್.ಡಿ.ದೇವೇಗೌಡರು, ಕುಮಾರಸ್ವಾಮಿ, ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಹಲವು ಜೆಡಿಎಸ್ ನಾಯಕರೊಂದಿಗೆ ಪ್ರತಾಪ್‌ಸಿಂಹ ಉತ್ತಮ ಒಡನಾಟವನ್ನೂ ಹೊಂದಿದ್ದಾರೆ. ಇದರ ಫಲವೇ ಇದೀಗ ಚನ್ನಪಟ್ಟಣದ ಮೈತ್ರಿ ಟಿಕೆಟ್ ಪ್ರತಾಪ್ ಸಿಂಹ ಪಾಲಾಗುತ್ತಿದೆ ಎಂಬ ಖಚಿತತೆಯನ್ನು ಹೆಚ್ಚು ಮಾಡುತ್ತಿದೆ.

ಒಪ್ಪಿಗೆ ಸೂಚಿಸದ ಪ್ರತಾಪ್ ಸಿಂಹ:
ಚನ್ನಪಟ್ಟಣ ವಿಧಾನಸಭಾ ಚುನಾವಣೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರನ್ನು ಸೂಚಿಸಿದ್ದು ಬೇರಾರೂ ಅಲ್ಲ, ಸ್ವತಃ ಜೆಡಿಎಸ್‌ನ ನಾಯಕರು. ಮಾಜಿ ಸಚಿವ ಸಾ.ರಾ. ಮಹೇಶ್, ಬಂಡೆಪ್ಪ ಕಾಶೆಂಪುರ್ ಸೇರಿದಂತೆ ಹಲವು ನಾಯಕರು ಪ್ರತಾಪ್ ಸಿಂಹ ಅವರಿಗೆ ಜೆಡಿಎಸ್‌ ಟಿಕೆಟ್ ಕೊಟ್ಟು ಚನ್ನಪಟ್ಟಣದಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿ ಎಂದು ಮನವಿ ಮಾಡಿದ್ದಾರೆ. ಜೆಡಿಎಸ್‌ನಿಂದ ಸ್ಪರ್ಧೆ ಮಾಡಲು ಇನ್ನೂ ಪ್ರತಾಪ್ ಸಿಂಹ ಅವರು ಒಪ್ಪಿಗೆ ಸೂಚಿಸಿಲ್ಲ.

ಕುಮಾರಸ್ವಾಮಿ ಲೆಕ್ಕಾಚಾರ ಏನು?
ಜೆಡಿಎಸ್‌ನಿಂದ ಗೆದ್ದ ಚನ್ನಪಟ್ಟಣವನ್ನು ಪುನಃ ಸೋತ ಅಭ್ಯರ್ಥಿ ಸಿ.ಪಿ. ಯೊಗೇಶ್ವರ ಅವರಿಗೆ ಕೊಡಲು ಸ್ವತಃ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮನಸ್ಸಿಲ್ಲ. ಮತ್ತೊಂದೆಡೆ ಡಿಕೆಶಿವಕುಮಾರ್ ಸವಾಲಾಗಿ ಸ್ವೀಕರಿಸಿರುವ ಕ್ಷೇತ್ರದಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಿ ಪುನಃ ಮಗನ ರಾಜಕೀಯ ಅದೃಷ್ಟ ಪಣಕ್ಕಿಡಲು ಮನಸ್ಸಿಲ್ಲ. ಆದ್ದರಿಂದ ಒಕ್ಕಲಿಗ ನಾಯಕನಾಗಿ ಬೆಳೆಯುತ್ತಿದ್ದ ಪ್ರತಾಪ್ ಸಿಂಹಗೆ ಮೈಸೂರು ಲೋಕಸಭಾ ಟಿಕೆಟ್ ಅನ್ನು ಬಿಜೆಪಿ ನಿರಾಕರಿಸಿದ್ದು ಕೂಡ ಒಕ್ಕಲಿಗರಿಗೆ ಸಿಂಪತಿಯಿದೆ. ಆದ್ದರಿಂದ ಇದೀಗ ಪ್ರತಾಪ್ ಸಿಂಹ ಅವರನ್ನು ಕಣಕ್ಕಿಳಿಸಬೇಕೇ? ಎಂಬ ಆಲೋಚನೆಯೂ ಕುಮಾರಸ್ವಾಮಿ ಮನಸ್ಸಿನಲ್ಲಿ ಓಡುತ್ತಿರಬಹುದು ಎನ್ನಲಾಗಿದೆ.

You may also like

Leave a Comment