Home » Bengaluru : ಏ.1 ರಿಂದ ಮನೆ ಕಸಕ್ಕೂ ಶುಲ್ಕ – ಸರ್ಕಾರ ಆದೇಶ!!

Bengaluru : ಏ.1 ರಿಂದ ಮನೆ ಕಸಕ್ಕೂ ಶುಲ್ಕ – ಸರ್ಕಾರ ಆದೇಶ!!

0 comments

Bengaluru : ಬಸ್ ಟಿಕೆಟ್ ದರ, ಮೆಟ್ರೋ ಪ್ರಯಾಣದರ ಹಾಗೂ ಕರೆಂಟ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ(Bengaluru) ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಅದೇನೆಂದರೆ ಬೆಂಗಳೂರಿನಲ್ಲಿ ಏ.1 ರಿಂದ ಪ್ರತಿ ಮನೆಯಿಂದ ಸಂಗ್ರಹಿಸುವ ಕಸಕ್ಕೂ ಶುಲ್ಕ ವಸೂಲಿಗೆ ಸರ್ಕಾರ ಅನುಮೋದನೆ ನೀಡಿದೆ.

ಹೌದು, ತ್ಯಾಜ್ಯ ಸಂಸ್ಕರಣೆ ಮಾಡದ ಅಪಾರ್ಟ್ಮೆಂಟ್ಗಳು ಅಥವಾ ದೊಡ್ಡ ವಾಣಿಜ್ಯ ಸಂಸ್ಥೆಗಳಂತಹ ಬೃಹತ್ ತ್ಯಾಜ್ಯ ಉತ್ಪಾದಕರಿಂದ ಪ್ರತಿ ಕೆ.ಜಿ. ತ್ಯಾಜ್ಯಕ್ಕೆ 12 ರೂ. ಬಳಕೆದಾರ ಶುಲ್ಕ ವಿಧಿಸಲು ಸರ್ಕಾರವು ಅವಕಾಶ ನೀಡಿದೆ.

ಇಷ್ಟೇ ಅಲ್ಲದೆ ಕಟ್ಟಡದ ವಿಸ್ತೀರ್ಣದ ಆಧಾರದ ಮೇಲೆ ಬಳಕೆದಾರ ಶುಲ್ಕ ನಿರ್ಧರಿಸಲಾಗುತ್ತದೆ ಎನ್ನಲಾಗಿದೆ. 600 ಚದರ ಅಡಿ ವರೆಗಿನ ಕಟ್ಟಡಗಳು ತಿಂಗಳಿಗೆ 10 ರೂ. ವರ್ಷಕ್ಕೆ 120 ರೂ. ಪಾವತಿಸಬೇಕು. 4,000 ಚದರ ಅಡಿಗಿಂತ ದೊಡ್ಡ ಕಟ್ಟಡಗಳಿಗೆ ತಿಂಗಳಿಗೆ ಗರಿಷ್ಠ 400 ರೂ. ವರ್ಷಕ್ಕೆ 4,800 ರೂ. ಪಾವತಿಸಬೇಕಾಗಿದೆ ಎಂದು ಹೇಳಲಾಗಿದೆ.

You may also like