Home » Chennai: ಮೂವರು ಶಿಕ್ಷಕರಿಂದ ಶಾಲಾ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್

Chennai: ಮೂವರು ಶಿಕ್ಷಕರಿಂದ ಶಾಲಾ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ ರೇಪ್

0 comments
Gang rape

Chennai: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ನಾಡಿನ ಉತ್ತಮ ಪ್ರಜೆಯನ್ನಾಗಿ ಮಾಡುವ ಹೊಣೆ ಹೊತ್ತಿರುವ ಶಿಕ್ಷಕರೇ ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ಎಸಗಿರುವ ನೀಚ ಕೃತ್ಯಕ್ಕೆ ಜೈಲು ಕಂಬಿ ಎನಿಸುತ್ತಿರುವ ಘಟನೆಯೊಂದು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ.

 

ಪ್ರೌಢಶಾಲೆಯ ಮೂವರು ಶಿಕ್ಷಕರು ವಿದ್ಯಾರ್ಥಿನಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದು, ಈ ಘಟನೆಗೆ ಕುರಿತಂತೆ ಸಂತ್ರಸ್ತ ವಿದ್ಯಾರ್ಥಿಯ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಆರೋಪಿ ಶಿಕ್ಷಕರುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ.

 

ಬಾಲಕಿ ಒಂದು ತಿಂಗಳಿನಿಂದ ಶಾಲೆಗೆ ಗೈರಾಗಿದ್ದು, ಈ ಕುರಿತು ಶಾಲೆಯ ಪ್ರಾಂಶುಪಾಲರು ವಿಚಾರಣೆ ಮಾಡಿದಾಗ, ಬಾಲಕಿಯ ತಾಯಿ ಮಗಳ ಮೇಲೆ ನಡೆದಿರುವ ದೌರ್ಜನ್ಯವನ್ನು ಹೇಳಿದ್ದಾರೆ. ಇದರಿಂದ ಆಘಾತಕ್ಕೆ ಒಳಗಾದ ಪ್ರಾಂಶುಪಾಲರು ದೂರು ದಾಖಲಿಸುವಂತೆ ನೀಡುವಂತೆ ಹೇಳಿದರು. ನಂತರ ಮೂವರು ಶಿಕ್ಷಕರನ್ನು ಬಂಧನ ಮಾಡಲಾಗಿದೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈ ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಶಿಕ್ಷಕರ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮೂವರು ಆರೋಪಿ ಶಿಕ್ಷಕರನ್ನು ಪೊಲೀಸರು ಬಂಧನ ಮಾಡಿದ್ದಾರೆ.

You may also like