Madhu Bangarappa: ರಾಜ್ಯದಲ್ಲಿ ಕೋಳಿ ಜ್ವರ ಹೆಚ್ಚುತ್ತಿದ್ದು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರಿಂದ ಚಿಕನ್ ಅಂಗಡಿ ಮಾಲೀಕರಿಗೂ ಕೂಡ ದೊಡ್ಡ ತಲೆನೋವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಹೇಗೆ ಎಂಬ ಪ್ರಶ್ನೆ ಉದ್ಭವವಾಗಿದೆ.
ಈ ಕುರಿತಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರತಿಕ್ರಿಯಿಸಿ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಇನ್ನು ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಕುರಿತು ಇಲಾಖೆ ನೀಡುವ ವರದಿಯನ್ನು ಆಧರಿಸಿ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಅಲ್ಲದೆ ಈ ಹಿಂದೆಯೂ ಕೋಳಿ ಜ್ವರ ಬಂದಾಗ ಸರ್ಕಾರ ಮೊಟ್ಟೆ ವಿತರಣೆ ಮುಂದುವರೆಸಿತ್ತು ಎಂದು ಉಲ್ಲೇಖಿಸಿದ ಸಚಿವರು, ಆರೋಗ್ಯ ಇಲಾಖೆ ವರದಿ ಆಧರಿಸಿ ಶಾಲೆಗಳಲ್ಲಿ ಮೊಟ್ಟೆ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
