Home » ದ.ಕ: ಜನರು ನೋಡುತ್ತಿದ್ದಂತೆಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿದ ಯುವಕ!

ದ.ಕ: ಜನರು ನೋಡುತ್ತಿದ್ದಂತೆಯೇ ನದಿಗೆ ಹಾರಿ ಆತ್ಮಹತ್ಯೆ ಮಾಡಿದ ಯುವಕ!

1 comment
Suicide Case

Suicide Case: ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿ ಇದೀಗ, ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ (Suicide Case)ಶರಣಾದ ಘಟನೆ ವರದಿಯಾಗಿದೆ.

ಸೋಮವಾರ ಬೆಳಗ್ಗೆ ಉದ್ಯಮಿಯೊಬ್ಬ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.ಆತ್ಮಹತ್ಯೆಗೆ ಶರಣಾದ ದುರ್ದೈವಿಯನ್ನು ಚಿಕ್ಕಮಗಳೂರಿನ ಮುಗುಳ ಬಳ್ಳಿ ಗೋಕುಲ್‌ ಫಾರ್ಮ್ ನಿವಾಸಿ ಪ್ರಸನ್ನ (37) ಎಂದು ಗುರುತಿಸಲಾಗಿದೆ.

ತೊಕ್ಕೊಟ್ಟಿನಿಂದ ಮಂಗಳೂರಿಗೆ ಬರುವ ದಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಪ್ರಸನ್ನ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಸಂದರ್ಭ ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ಯುವಕನ ರಕ್ಷಣೆಗೆ ಮುಂದಾದರು ಕೂಡ ಪ್ರಸನ್ನ ನೀರು ಪಾಲಾಗಿದ್ದರು ಎನ್ನಲಾಗಿದೆ.ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಉದ್ಯಮಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆಯ ಬಳಿಕವಷ್ಟೇ ಅಸಲಿ ವಿಚಾರ ಹೊರ ಬೀಳಬೇಕಾಗಿದೆ

You may also like

Leave a Comment