Home » Chinnaswamy : ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತೋ, ಇಲ್ವೋ 2026ರ IPL? BCCI ಮಹತ್ವದ ನಿರ್ಧಾರ!!

Chinnaswamy : ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತೋ, ಇಲ್ವೋ 2026ರ IPL? BCCI ಮಹತ್ವದ ನಿರ್ಧಾರ!!

0 comments

Chinnaswamy: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಪಂದ್ಯಗಳಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸುವುದಿಲ್ಲ. ಬಿಸಿಸಿಐನ (BCCI) ನಿರ್ಧಾರದಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಬೇಕು ಎಂದು ಕಾಯುತ್ತಿದ್ದ ಆರ್‌ಸಿಬಿ (RCB) ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.

ಹೌದು, ಭೀಕರ ಕಾಲ್ತುಳಿತದ (Stamped case) ಘಟನೆ ಬೆನ್ನಲ್ಲೇ 2026ರ ಐಪಿಎಲ್(Ipl 2026) ಪಂದ್ಯಗಳನ್ನು ಬೆಂಗಳೂರಿನಿಂದ (Bengaluru) ಸ್ಥಳಾಂತರಿಸಲಾಗಿದೆ. ಹೀಗಾಗಿ 2026ರ ಐಪಿಎಲ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ತವರು ಮೈದಾನ ಹುಡುಕಿಕೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಇನ್ನೂ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್​ನ ​​(ಎಂಸಿಎ) ಅಧೀನದಲ್ಲಿರುವ ಪುಣೆಯ MCA ಸ್ಟೇಡಿಯಂನಲ್ಲಿ ಆರ್​ಸಿಬಿ ತನ್ನ ಪಂದ್ಯಗಳನ್ನು ಆಯೋಜಿಸಲು ಮಾತುಕತೆ ನಡೆಸಿದೆ. ಹೀಗಾಗಿ ಐಪಿಎಲ್ 2026 ರಲ್ಲಿ ಆರ್​ಸಿಬಿ ಪುಣೆಯಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಲಾಗಿದೆ.

You may also like