Home » ಚಿಟ್ ಫಂಡ್ ವ್ಯವಹಾರದಿಂದ ಮೋಸಕ್ಕೊಳಗಾದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

ಚಿಟ್ ಫಂಡ್ ವ್ಯವಹಾರದಿಂದ ಮೋಸಕ್ಕೊಳಗಾದ ವೃದ್ಧ ನೇಣು ಬಿಗಿದು ಆತ್ಮಹತ್ಯೆ

0 comments

ಉಳ್ಳಾಲ: ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ವೃದ್ಧರೋರ್ವರು ಮೋಸಕ್ಕೊಳಗಾಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71) ಎಂದು ಗುರುತಿಸಲಾಗಿದೆ.

ಜಯರಾಮ್ ಶೆಟ್ಟಿ ಅವರು ಮಾಡೂರು ಬಸ್ಸು ತಂಗುದಾಣದ ಬಳಿಯ ಪಂಚಾಯತ್ ಕಟ್ಟಡದ ಅಂಗಡಿಯಲ್ಲಿ ಸೀಯಾಳ ವ್ಯಾಪಾರಿಯಾಗಿದ್ದು ,ಚಿಟ್ ಫಂಡ್ ವ್ಯವಹಾರವನ್ನೂ ನಡೆಸುತ್ತಿದ್ದರೆನ್ನಲಾಗಿದೆ. ಇಬ್ಬರು ಫಂಡ್ ಹಣ ಮರಳಿಸದೆ ಮೋಸ ಮಾಡಿದ್ದರಿಂದ, ಜಯರಾಮ್ ಶೆಟ್ಟಿ ತೀರ ನಷ್ಟ ಅನುಭವಿಸಿದ್ದು, ಇದೇ ಚಿಂತೆಯಲ್ಲೇ ಅವರು ನೇಣು ಬಿಗಿದು ಆತ್ಮ ಹತ್ಯೆಗೈದಿರುವುದಾಗಿ ಅವರ ಪತ್ನಿ ಕೋಟೆಕಾರ್ ಗ್ರಾಪಂ ಮಾಜಿ ಸದಸ್ಯೆ ಲೀನಾ ಪೊಲೀಸರಿಗೆ ದೂರು ನೀಡಿದ್ದಾರೆ.

ಮನೆಯ ಕೋಣೆಯೊಳಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಪತ್ನಿ ಲೀನಾ ಜೆ. ಶೆಟ್ಟಿ ಬೆಳಗ್ಗೆ ಚಹಾ ಕೊಡಲೆಂದು ಹೋಗುವಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You may also like

Leave a Comment