Home » ಮೆಕ್ಕೆಜೋಳ ಖರೀದಿಗೆ ಸಿಎಂ ಸೂಚನೆ

ಮೆಕ್ಕೆಜೋಳ ಖರೀದಿಗೆ ಸಿಎಂ ಸೂಚನೆ

0 comments

ಬೆಂಗಳೂರು: ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಇನ್ನೂ 76,430 ಮೆಟ್ರಿಕ್ ಟನ್ ಮೆಕ್ಕಜೋಳ ಖರೀದಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಒಟ್ಟು 93,782 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಗೆ ಇಂಡೆಂಟ್ ಪಡೆಯಲಾಗಿದ್ದು, ಈವರೆಗೆ 17,350 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿ ಪೂರ್ಣಗೊಂಡಿದೆ. ಇನ್ನೂ 76,430 ಮೆಟ್ರಿಕ್ ಟನ್ ಖರೀದಿ ಬಾಕಿಯಿದ್ದು, ನಿಗದಿತ ಪ್ರಮಾಣದಷ್ಟು ಖರೀದಿಗೆ ಕ್ರಮ ಕೈಗೊಳ್ಳಬೇಕು,” ಎಂದು ಸೂಚಿಸಿದರು.

“ಎಥೆನಾಲ್ ಖರೀದಿ ಸಂಬಂಧ ಕೇಂದ್ರಕ್ಕೆ ಸಲ್ಲಿಸಿದ್ದ ಮನವಿಗೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ಮೂಲಕ ಕೇಂದ್ರ ಸರಕಾರ ರಾಜ್ಯದ ಮೆಕ್ಕೆಜೋಳ ಬೆಳೆಗಾರರ ಕುರಿತು ನಕಾರಾತ್ಮಕ ಧೋರಣೆ ಮುಂದುವರಿಸಿದೆ. ಈ ಹಿನ್ನೆಲೆ ಯಲ್ಲಿ ಇಂಡೆಂಟ್ ನಿಗದಿ ಪಡಿಸಿರುವ ಪ್ರಮಾಣದಷ್ಟು ಮೆಕ್ಕೆಜೋಳ ಖರೀದಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಬೇಕು,” ಎಂದು ಸೂಚನೆ ನೀಡಿದರು

You may also like