CM Siddaramaiah: ರಾಜ್ಯ ಉಸ್ತುವಾರಿ ಸುರ್ಜೇವಾಲಾ ಒನ್ ಟು ಒನ್ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದು, ಕಾಂಗ್ರೆಸ್ ನ ಎಲ್ಲಾ ಶಾಸಕರಿಗೂ ಸಿಎಂ ಪತ್ರ ಬರೆದಿದ್ದಾರೆ. 50 ಕೋಟಿ ಅನುದಾನ ಬಿಡುಗಡೆ ಮಾಡುವ ಸಂಬಂಧ ಈ ಪತ್ರ ಬರೆಯಲಾಗಿದೆಯಂತೆ. ಕೈ ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆ ಮಾಡಲಾಗಿದೆ.
ಅಲ್ಲದೆ ಶೀಘ್ರದಲ್ಲಿ ಆಯಾಯ ವಿಧಾನ ಕ್ಷೇತ್ರದ ಕಾಮಗಾರಿಗಳ ಕುರಿತು ಸಿಎಂ ಸಭೆ ನಡೆಸಲಿದ್ದಾರೆ. ಜುಲೈ 30-31 ರಂದು ವಿಧಾನಸೌಧದಲ್ಲಿ ಜಿಲ್ಲಾವಾರು ಕಾಂಗ್ರೆಸ್ ಶಾಸಕರ ಪ್ರತ್ಯೇಕ ಸಭೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ.
ಶಾಸಕರ ಸರಣಿ ದೂರಿನ ಹಿನ್ನೆಲೆ ಸುರ್ಜೆವಾಲ ಸಿಎಂಗೆ ಸುರ್ಜೆವಾಲಾ ಕ್ಲಾಸ್ ತೆಗೆದುಕೊಂಡ ಬೆನ್ನಲ್ಲೆ ಅನುದಾನ ಬಿಡುಗಡೆ ಶಾಸಕರ ಸಭೆ ಕರೆದಿದ್ದಾರೆ ಸಿಎಂ. ಶಾಸಕರು ತಮ್ಮ ತಮ್ಮ ಕ್ಷೇತ್ರಗಳಿಗೆ ಸರಿಯಾಗಿ ಅನುದಾನ ಬಿಡುಗಡೆ ಆಗುತ್ತಿಲ್ಲ ಎಂದು ಅಸಮಾಧಾನ, ಹಾಗೂ ಬೇಸರ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶಾಸಕರಿಗೆ ಬಂಪರ್ ಕೊಡುಗೆ ನೀಡಲು ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ.
ಎರಡು ದಿನಗಳ ಕಾಲ ಶಾಸಕರೊಂದಿಗೆ ಸಿಎಂ ಸಭೆ ನಡೆಸಿ, ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆ ರಸ್ತೆ, ಸೇತುವೆ, ಕಾಮಗಾರಿ, ಗ್ರಾಮೀಣ ರಸ್ತೆ ಹಾಗೂ ನಗರ ಕಾಮಗಾರಿಗಳಿಗೆ 37.5 ಕೋಟಿ ಮೀಸಲು ಇಡಲಾಗಿದೆ. 12.5 ಕೋಟಿ ಶಾಸಕರ ವಿವೇಚನಾಧಿಕಾರಕ್ಕೆ ಮೀಸಲಿಡಲಾಗಿದೆ.
ಜುಲೈ 30-31 ರಂದು ಶಾಸಕರ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ, ಶಾಸಕರ ಬೇಡಿಕೆ ಪತ್ರದೊಂದಿಗೆ ಕಾಮಗಾರಿ ವಿವರಗಳನ್ನು ನೀಡುವಂತೆ ಸೂಚನೆ ನೀಡಿದ್ದಾರೆ. ಶಾಸಕರ ಅಸಮಾಧಾನ ತಣಿಸಲು 50 ಕೋಟಿ ಸಿಎಂ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿ ಹಣ ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ: Ragi Idli: ಸಂಸತ್ತಿನ ಕ್ಯಾಂಟೀನ್ ಮೆನುವಿಗೆ ಸೇರ್ಪಡೆಯಾದ ರಾಗಿ ಇಡ್ಲಿ!! ಇದನ್ನು ಮಾಡೋದ್ಹೇಗೆ?
