Home » Hassan: ಟ್ರ್ಯಾಕ್ಟರ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಪರಮಾಪ್ತ ದುರ್ಮರಣ !!

Hassan: ಟ್ರ್ಯಾಕ್ಟರ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ ಪರಮಾಪ್ತ ದುರ್ಮರಣ !!

0 comments

Hassan: ಟ್ರ್ಯಾಕ್ಟರ್ (Tractor) ಇಂಜಿನ್ ಮಗುಚಿ ಬಿದ್ದು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಆಪ್ತರೊಬ್ಬರು ಸಾವನ್ನಪ್ಪಿದ ಘಟನೆ ಅರಸೀಕೆರೆ ತಾಲೂಕಿನ ಗಂಡಸಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಎಂಬಲ್ಲಿ ಈ ಘಟನೆ ನಡೆದಿದೆ. ಜಗದೀಶ್ (52) ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಸಾಗಿಸುವಾಗ ಇಂಜಿನ್ ಪಲ್ಟಿಯಾದ್ದು, ಕೆಳಗೆ ಸಿಲುಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಜಗದೀಶ್ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಪೇದೆಯಾಗಿದ್ದರು. ಚುನಾವಣೆಗೆ ಸ್ಪರ್ಧಿಸಲು ಪೊಲೀಸ್ ಇಲಾಖೆಗೆ ರಾಜೀನಾಮೆ ನೀಡಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಜಗದೀಶ್ ಅವರು ಸಿಎಂ ಸಿದ್ದರಾಮಯ್ಯ ಆಪ್ತ ಹಾಗೂ ಮಾಜಿ ಸಚಿವ ಹೆಚ್ ಎಂ ರೇವಣ್ಣ ಆಪ್ತರಾಗಿದ್ದರು.

You may also like