CM Siddaramiah : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತುರ್ತು ಸಂದರ್ಭದಲ್ಲಿ ಯಾವುದಾದರೂ ಸಭೆ ಸಮಾರಂಭಗಳಿಗೆ ತೆರಳುವಾಗ ಹೆಲಿಕಾಪ್ಟರ್ ನಲ್ಲಿ ತೆರಳುವುದು ಸಾಮಾನ್ಯ. ಆದರೆ ನಮ್ಮ ಸಿಎಂ ಅವರ ಈ ಹೆಲಿಕ್ಯಾಪ್ಟರ್ ಪ್ರಯಾಣ ಸಿಕ್ಕಾಪಟ್ಟೆ ದುಬಾರಿಯಾಗಿದೆ ಕಣ್ರೀ. ಏಕೆಂದರೆ ಸಿಎಂ ಆದಾಗಿನಿಂದ ಸಿದ್ದರಾಮಯ್ಯ ಇದುವರೆಗೂ ಹೆಲಿಕ್ಯಾಪ್ಟರ್ ಮತ್ತು ವಿಮಾನ ಪ್ರಯಾಣಕ್ಕೆ ಮಾಡಿದ ರಾಜ್ಯದ ಬೊಕ್ಕಸದಿಂದ ಖರ್ಚು ಮಾಡಿದ ಹಣದ ಬಗ್ಗೆ ಕೇಳಿದರೆ ನೀವೇ ಶಾಕ್ ಆಗುತ್ತೀರಿ.
ಸದ್ಯ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ವೇಳೆ ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ರವಿ ಕುಮಾರ್ ಅವರು ಈ ಕುರಿತು ಸರ್ಕಾರಕ್ಕೆ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಮಾನ ಮತ್ತು ಹೆಲಿಕಾಪ್ಟರ್ ಪ್ರಯಾಣದ ವೆಚ್ಚವು ಕಳೆದ ಎರಡು ವರ್ಷಗಳಲ್ಲಿ (2023 ರಿಂದ 2025ರ ನವೆಂಬರ್ ವರೆಗೆ) ಬರೋಬ್ಬರಿ ₹47.38 ಕೋಟಿ ತಲುಪಿದೆ ಎಂಬ ಉತ್ತರ ಬಂದಿದೆ.
ಯಸ್, ಹೆಲಿಕಾಪ್ಟರ್ ಹಾಗೂ ವಿಮಾನ ಪ್ರಯಾಣದ ಒಟ್ಟು ವೆಚ್ಚ ₹47,38,24,347 ಎಂದು ಸರ್ಕಾರ ತಿಳಿಸಿದೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮತ್ತು ದೆಹಲಿ, ಚೆನ್ನೈ, ಹೈದರಾಬಾದ್‌ನಂತಹ ಹೊರ ರಾಜ್ಯಗಳಿಗೆ ಅಧಿಕೃತ ಓಡಾಟ ಮಾಡಿದ್ದರಿಂದ ಈ ವೆಚ್ಚವಾಗಿದೆ ಎಂದು ಸರ್ಕಾರ ತಿಳಿಸಿದೆ. ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಪ್ರಯಾಣಕ್ಕೆ 2023-24ರಲ್ಲಿ 12.65 ಕೋಟಿ ರೂ. ಮತ್ತು 2024-25ರ ಜನವರಿ 15 ರವರೆಗೆ 19.35 ಕೋಟಿ ರೂ. ವೆಚ್ಚ ಮಾಡಲಾಗಿತ್ತು. ಕೇವಲ ಒಂದೂವರೆ ಗಂಟೆ ಪ್ರಯಾಣದ ಮೈಸೂರಿನಂತಹ ಹತ್ತಿರದ ಸ್ಥಳಗಳಿಗೂ ಸಿಎಂ ಹೆಲಿಕಾಪ್ಟರ್ ಬಳಸಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
