Karnataka BJP ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಪಕ್ಷದಲ್ಲೇ ಅಸಮಾಧಾನ ಭಗಿಲೆದ್ದ ಕಾರಣ ಅವರ ರಾಜ್ಯಾಧ್ಯಕ್ಷ ಕುರ್ಚಿ ಅಲುಗಾಡುತ್ತಿದೆ. ರಾಜ್ಯದಲ್ಲಿ ಅನೇಕ ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಈ ನಡುವೆ ಅಚ್ಚರಿ ಎಂಬಂತೆ ರಾಜ್ಯ ಬಿಜೆಪಿ ಅಧ್ಯಕ್ಷರ ಆಯ್ಕೆಗಾಗಿ ಹೈಕಮಾಂಡ್ ಚುನಾವಣೆ ನಡೆಸಲು ಮುಂದಾಗಿದೆ. ಈ ಬೆನ್ನಲ್ಲೇ ವಿಜಯೇಂದ್ರಗೆ ಕೋಕ್ ನೀಡಿ ಉತ್ತರ ಕರ್ನಾಟಕದ ಈ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ಕಟ್ಟಲು ತೀರ್ಮಾನಿಸಲಾಗಿದೆ ಎಂಬ ಸುದ್ದಿ ಒಂದು ಬಂದಿದೆ.


ಹೌದು, ಮೊದಲಿನಿಂದಲೂ ಉತ್ತರ ಕರ್ನಾಟಕದ ನಾಯಕನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನ ನೀಡಬೇಕು ಎನ್ನುವ ಕೂಗು ಕೇಳಿ ಬಂದಿತ್ತು. ಹೀಗಾಗಿ ಉತ್ತರ ಕರ್ನಾಟಕದ ಲಿಂಗಾಯತ ನಾಯಕ ಅರವಿಂದ್‌ ಬೆಲ್ಲದ್‌ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನ ನೀಡುವ ಕುರಿತು ಚರ್ಚೆಯಾಗುತ್ತಿದೆ.

ಇದೀಗ ರಾಜ್ಯದಲ್ಲಿ ಒಳಜಗಳ ಹೆಚ್ಚಾಗುತ್ತಿರುವ ಕಾರಣ ಬಿಜೆಪಿ ಹೈಕಮಾಂಡ್ ಚುನಾವಣೆ ಮೂಲಕ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಲು ನಿರ್ಧರಿಸಿದೆ. ಚುನಾವಣಾ ಉಸ್ತುವಾರಿಯನ್ನಾಗಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ನೇಮಿಸಲಾಗಿದೆ.

You may also like