Home » Government employees: ನವೆಂಬರ್ 1ರೊಳಗೆ ಸರ್ಕಾರಿ ನೌಕರರರಿಗೆ ಈ ನಿಯಮ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

Government employees: ನವೆಂಬರ್ 1ರೊಳಗೆ ಸರ್ಕಾರಿ ನೌಕರರರಿಗೆ ಈ ನಿಯಮ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

0 comments

Government employees: ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ಸರ್ಕಾರಿ ನೌಕರರು (Government employees) ನವೆಂಬರ್.1ರೊಳಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಧರಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ. ಅಲ್ಲದೇ ನಿಯಮ ಪಾಲಿಸದೇ ಇದ್ದರೇ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಕೆಂಪು-ಹಳದಿ ಬಣ್ಣದ ಟ್ಯಾಗ್ ಧರಿಸುವ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಕೊರಳುದಾರ (ಟ್ಯಾಗ್) ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸಂಖ್ಯೆ: ಸಿಆಸುಇ 4 ರಾಸ 2024, ದಿನಾಂಕ:16,08,2024 ರ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು ಎಂದಿದ್ದಾರೆ.

You may also like

Leave a Comment