Home » Census: ಜಾತಿಗಣತಿ ಬದಲು ಕನ್ನಡ ಭಾಷಿಕರ ಸಮೀಕ್ಷೆ ನಡೆಸಿ – ಹೋರಾಟಗಾರ ವಾಟಾಳ್ ನಾಗರಾಜ್

Census: ಜಾತಿಗಣತಿ ಬದಲು ಕನ್ನಡ ಭಾಷಿಕರ ಸಮೀಕ್ಷೆ ನಡೆಸಿ – ಹೋರಾಟಗಾರ ವಾಟಾಳ್ ನಾಗರಾಜ್

0 comments

Census: ಜಾತಿಗಳ ಮರು ಸಮೀಕ್ಷೆ ನಡೆಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, “ಜಾತಿಗಣತಿ ಬದಲು ಕನ್ನಡ ಭಾಷಿಕರ ಸಮೀಕ್ಷೆ ನಡೆಸಿ” ಎಂದು ಮೈಸೂರಿನಲ್ಲಿ ಹೇಳಿದ್ದಾರೆ. “ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಇದ್ದಂತೆ ಇಲ್ಲ, ಎರಡನೇ ಅವಧಿಯಲ್ಲಿ ಬಲಹೀನರಾಗಿದ್ದಾರೆ. ನೂರಾರು ನಾಗರಹಾವುಗಳ ಮಧ್ಯೆ ಸಿದ್ದರಾಮಯ್ಯ ಸಿಲುಕಿಕೊಂಡಿದ್ದಾರೆ”, ಹಾಗಾಗಿ ಮರು ಜಾತಿಗಣತಿ ವಿಚಾರದಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು. ಕನ್ನಡಿಗರ ಲೆಕ್ಕ ಹಾಕಿ, ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದರು.

ರಾಜ್ಯದಲ್ಲಿ ಅನ್ಯ ಭಾಷಿಕರ ಪ್ರಾಬಲ್ಯ ಜಾಸ್ತಿಯಾಗುತ್ತಿದೆ. ಹಾಗಾಗಿ ಕರ್ನಾಟಕದಲ್ಲಿ ಎಷ್ಟು ಮಂದಿ ಕನ್ನಡಿಗರು ಇದ್ದಾರೆ ಎಂದು ಸರ್ಕಾರ ಗಣತಿ ಮಾಡಬೇಕು. ಕನ್ನಡ ಭಾಷಿಕರು ಹಾಗೂ ಪರ ಭಾಷಿಕರು ಎಷ್ಟಿದ್ದಾರೆ ಎಂದು ಲೆಕ್ಕ ಹಾಕಿ, ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಮಾಡಬೇಕು ಎಂದು ಈ ವೇಳೆ ಎಚ್ಚರಿಸಿದರು.

ಇದೇ ವೇಳೆ ಮಾತನಾಡಿದ ಅವರು, ಕೆಆರ್‌ಎಸ್‌ ಜಲಾಶಯಕ್ಕೆ ಅದರದ್ದೇ ಆದ ಐತಿಹಾಸಿಕ ಹಿನ್ನೆಲೆಯಿದೆ. ಅದಕ್ಕೊಂದು ವಿಶೇಷವಾದ ಮಹತ್ವವಿದೆ. ಕೆಆರ್‌ಎಸ್‌ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ ಹಾಗೂ ಕಾವೇರಿ ಆರತಿಗೆ ಅವರು ವಿರೋಧ ವ್ಯಕ್ತಪಡಿಸಿದರು. ಅಲ್ಲಿ ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಪಾರ್ಕ್ ನಿರ್ಮಾಣ ಮಾಡುವ ಅಗತ್ಯವಿಲ್ಲ. ಹಾಗೆ ಕಾವೇರಿ ಆರತಿ ಕಾರ್ಯಕ್ರಮ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಸರ್ಕಾರದ ನಿರ್ಧಾರದ ವಿರುದ್ಧ ವಾಗ್ದಾಳಿ ನಡೆಸಿದರು.

You may also like