Home » Karnataka Rain: ಮುಂದುವರಿದ ಮಳೆ: ಇಂದು ಕೂಡಾ ಶಾಲೆಗಳಿಗೆ ರಜೆ

Karnataka Rain: ಮುಂದುವರಿದ ಮಳೆ: ಇಂದು ಕೂಡಾ ಶಾಲೆಗಳಿಗೆ ರಜೆ

by Mallika
0 comments
Monsoon Rain

Karnataka Rain: ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಜುಲೈ 10 ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್‌ ಘೋಷಣೆಯಾಗಿದೆ. ಇಂದು ಕೂಡಾ ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲೂಕಿನಲ್ಲಿ ಅಂಗನವಾಡಿಗಳಿಗೆ ಇವತ್ತು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ ಹೊರಡಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್‌ ರಜೆ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: Chikkamaglur: 10 ದಿನಗಳಿಂದ ನಾಪತ್ತೆಯಾಗಿದ್ದ ‘ಫಾರೆಸ್ಟ್ ಗಾರ್ಡ್’ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆ !!

You may also like