Home » Kamal Haasan: ಕನ್ನಡದ ಕುರಿತು ವಿವಾದಾತ್ಮಕ ಹೇಳಿಕೆ – ನಟ ಕಮಲ್ ಹಾಸನ್ ವಿರುದ್ಧ ಪ್ರಕರಣ ದಾಖಲು

Kamal Haasan: ಕನ್ನಡದ ಕುರಿತು ವಿವಾದಾತ್ಮಕ ಹೇಳಿಕೆ – ನಟ ಕಮಲ್ ಹಾಸನ್ ವಿರುದ್ಧ ಪ್ರಕರಣ ದಾಖಲು

0 comments

Kamal Haasan: ಸಿನಿಮಾ ಪ್ರಮೋಷನ್​ಗಾಗಿ ಬೆಂಗಳೂರಿಗೆ ಬಂದಿದಾಗ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಬೆನ್ನಲ್ಲೇ ಕರ್ನಾಟಕದಾದ್ಯಂತ ಕಮಲ್ ಹಾಸನ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು. ಆದರೆ ಕಮಲ್ ಹಾಸನ್ ಮಾತ್ರ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದು ಉದ್ಧಟತನ ತೋರಿದ್ದಾರೆ. ಈ ಬೆನ್ನಲ್ಲೇ ಕನ್ನಡದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನಟ ಕಮಲ್ ಹಾಸನ್ ವಿರುದ್ಧ ಪ್ರಕರಣ ದಾಖಲಾಗಿದೆ.

ನಟ ಕಮಲ್ ಹಾಸನ್ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆಗೆ ಕರವೇ ಅಧ್ಯಕ್ಷ ಪ್ರವೀಣ್ ಶೆಟ್ಟಿ ಅವರು ದೂರು ಸಲ್ಲಿಕೆ ಮಾಡಿದ್ದಾರೆ. ಕನ್ನಡಿಗರ ಭಾವನೆಗೆ ನಟ ಕಮಲ್ ಹಾಸನ್ ಧಕ್ಕೆ ತಂದಿದ್ದಾರೆ. ಆತನ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿದ್ದಾರೆ.

You may also like