2
Corruption: 300 ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರ ಬಲೆಗೆ ರೆಡ್ ಹ್ಯಾಂಡ್ ಆಗಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಿಲುಕಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್ ನಾಯಕ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇ ಸ್ವತ್ತು ನೀಡಲು ಲಂಚ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಶ್ರೀರಾಂಪುರದ ವಿನೋದ್ ಅವರಿಂದ ಲಂಚ ಪಡೆಯುತ್ತಿರುವ ವೇಳೆ ಈ ಘಟನೆ ನಡೆದಿದ್ದು ಲೋಕಾಯುಕ್ತರು ಕುಮಾರ್ ನಾಯಕ್ ಎನ್ನುವವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
