Lucknow: ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರು ಹಾಜರಾಗಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ರೂ.200 ದಂಡ ವಿಧಿಸಿದೆ. ಪ್ರಕರಣದ ವಿಚಾರಣೆಯಲ್ಲಿ ಎ.14 ಕ್ಕೆ ಮುಂದೂಡಲಾಗಿದೆ.
ರಾಹುಲ್ ಗಾಂಧಿ ಗೈರು ಹಾಜರಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ನ್ಯಾಯಾಲಯವು ಎಚ್ಚರಿಕೆ ನೀಡಿದೆ.
ನನ್ನ ಹೆಸರು ಸಾವರ್ಕರ್ ಅಲ್ಲ. ನನ್ನ ಹೆಸರು ಗಾಂಧಿ ಮತ್ತು ಗಾಂಧಿ ಯಾರ ಬಳಿಯೂ ಕ್ಷಮೆಯೂ ಕೇಳುವುದಿಲ್ಲ ಎಂದು 2022 ರ ನವೆಂಬರ್‌ನಲ್ಲಿ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದರು.
ಜೊತೆಗೆ “ಸಾರ್ವಕರತ್ ಅವರು ಬ್ರಿಟಿಷರಿಗೆ ಸಹಾಯ ಮಾಡಿದ್ದರು. ಅಲ್ಲದೆ ಕ್ಷಮಾದಾನ ಕೋರಿ ಪತ್ರವನ್ನೂ ಬರೆದಿದ್ದರು” ಎಂದು ಆರೋಪ ಮಾಡಿದ್ದರು. ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಕೋಮುಸೌಹಾರ್ದತೆ ಕದಡುವ ಯತ್ನ ಹಾಗೂ ದ್ವೇಷ ಹರಡಿದ ಆರೋಪದಡಿ ಪ್ರಕರಣವು ರಾಹುಲ್ ಗಾಂಧಿ ವಿರುದ್ಧ ದಾಖಲಾಗಿತ್ತು. ರಾಹುಲ್ ಗಾಂಧಿ ಸಾರ್ವಕರ್ ಅವರನ್ನು ʼಬ್ರಿಟಿಷರ ಸೇವಕʼ ಎಂದು ಕರೆದಿದ್ದಾರೆ.
ಸಾರ್ವಕರ್ ವಿರುದ್ಧದ ಕರಪತ್ರಗಳನ್ನೂ ಕೂಡಾ ರಾಹುಲ್ ಗಾಂಧಿ ಸುದ್ದಿಗೋಷ್ಠಿಗೂ ಮುನ್ನ ಹಂಚಿದ್ದರು ಎಂದು ದೂರುದಾರ ನೃಪೇಂದ್ರ ಪಾಂಡೆ ವಾದಿಸಿದ್ದಾರೆ.
