4
Actress Ranya Rao: ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿರುವ ಸ್ಯಾಂಡಲ್‌ವುಡ್ ನಟಿ ರನ್ಯಾರಾವ್‌ರನ್ನು ಮೂರು ದಿನ ಡಿಆರ್‌ಐ ಕಸ್ಟಡಿಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ನೀಡಿದೆ.
ಮಾರ್ಚ್ 18ರವರೆಗೆ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.
ನಂತರ ಡಿಆರ್‌ಐ ಅಧಿಕಾರಿಗಳು ತಮ್ಮ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ಮೂರು ದಿನ ಡಿಆರ್‌ಐ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
