Home » Actor Darshan: ದೇಶಾದ್ಯಂತ ಸುತ್ತಾಡಲು ದರ್ಶನ್‌ಗೆ ಕೋರ್ಟ್‌ ಪರ್ಮಿಷನ್‌

Actor Darshan: ದೇಶಾದ್ಯಂತ ಸುತ್ತಾಡಲು ದರ್ಶನ್‌ಗೆ ಕೋರ್ಟ್‌ ಪರ್ಮಿಷನ್‌

0 comments
Darshan

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಜಾಮೀನು ನೀಡಿದ ಸಂದರ್ಭದಲ್ಲಿ ಪೂರ್ವಾನುಮತಿಯಿಲ್ಲದೆ ಸೆಷನ್ಸ್‌ ಕೋರ್ಟ್‌ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ ಎಂದು ಷರತ್ತನ್ನು ಸಡಿಲಿಸಿದ್ದು, ಹೈಕೋರ್ಟ್‌, ದೇಶವ್ಯಾಪಿ ಹೋಗಲು ಅನುಮತಿ ನೀಡಿದೆ.

ಕಲಬುರಗಿ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ಪೀಠ ಈ ಆದೇಶ ನೀಡಿದೆ. ಹೀಗಾಗಿ ನಟ ದರ್ಶನ್‌ ಇನ್ನು ಮುಂದೆ ದೇಶವ್ಯಾಪಿ ಎಲ್ಲಿ ಬೇಕಾದರೂ ಹೋಗಬಹುದಾಗಿದೆ. ಆದರೆ ವಿದೇಶಕ್ಕೆ ಹೋಗುವಂತಿಲ್ಲ.

ದರ್ಶನ್‌ ಪರ ವಕೀಲರು, ದರ್ಶನ್‌ ಶೂಟಿಂಗ್‌ಗಾಗಿ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದ ಇತರೆಡೆ ಸಂಚರಿಸಬೇಕಾಗುತ್ತದೆ. ಹಾಗಾಗಿ ನ್ಯಾಯಾಲಯ ಷರತ್ತನ್ನು ಸ್ವಲ್ಪ ಸಡಿಲಿಕೆ ಮಾಡಬೇಕು ಎಂದು ಕೋರಿದರು. ತನಿಖಾಧಿಕಾರಿಗಳ ಪರ ವಿಶೇಷ ಅಭಿಯೋಜಕರಾದ ಪ್ರಸನ್ನ ಕುಮಾರ್‌ ಅವರು ಈ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಅರ್ಜಿದಾರರು ಜಾಮೀನು ಪಡೆಯುವಾಗ ಅನಾರೋಗ್ಯದ ಕಾರಣ ನೀಡಿದ್ದರು. ಆದರೆ ಇದೀಗ ದೇಶದೆಲ್ಲೆಡೆ ಸುತ್ತಾಡಲು ಬಯಸುತ್ತಿದ್ದಾರೆ. ಕೋರ್ಟ್‌ ಇದಕ್ಕೆ ಅವಕಾಶ ನೀಡಬಾರದು ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಜಾಮೀನು ಷರತ್ತು ಸಡಿಲಿಸಿದ್ದು, ಅನುಮತಿಯಿಲ್ಲದೇ ದೇಶ ಬಿಟ್ಟು ತೆರಳುವಂತಿಲ್ಲ ಎಂದು ಆದೇಶ ನೀಡಿದೆ.

You may also like