Home » Janardhana Reddy: ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಲು ಹಾಕಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್‌

Janardhana Reddy: ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಲು ಹಾಕಿದ್ದ ಅರ್ಜಿ ತಿರಸ್ಕರಿಸಿದ ಕೋರ್ಟ್‌

0 comments
Janardhan Reddy

Janardhana Reddy: ಓಬಳಾಪುರಂ ಮೈನಿಂಗ್‌ ಕಂಪನಿಯ ಅಕ್ರಮ ಕಬ್ಬಿಣದ ಅದಿರು ಗಣಿಗಾರಿಕೆ ಪ್ರಕರಣದಲ್ಲಿ ಜೈಲಿನಲ್ಲಿರುವ ಕರ್ನಾಟಕದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ತಮಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳನ್ನು ಕೊರಿ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ನ್ಯಾಯಾಲಯ ತಿರಸ್ಕರಿಸಿದೆ.

ಚಂಚಲಗುಡ ಜೈಲಿನಲ್ಲಿರುವ ರೆಡ್ಡಿ, ತಾವು ಮಾಜಿ ಸಚಿವರು ಮತ್ತು ತೆರಿಗೆ ಪಾವತಿದಾರರಾಗಿರುವುದರಿಂದ ಜೈಲರ್‌ಗಳ ಕಾಯ್ದೆಯಡಿಯಲ್ಲಿ ಜೈಲಿನಲ್ಲಿ ʼಎʼ ದರ್ಜೆಯ ಸೌಲಭ್ಯಗಳನ್ನು ನೀಡುವಂತೆ ಅರ್ಜಿ ಹಾಕದಿದರು. ಆದರೆ ಕೋರ್ಟ್‌ ಈ ಅರ್ಜಿಯ ವಿಚಾರಣೆ ನಡೆಸಲು ನಿರಾಕರಿಸಿದೆ. ಹೈಕೋರ್ಟ್‌ಗೆ ತೆರಳಲು ಸೂಚಿಸಿದೆ ಎಂದು ವರದಿಯಾಗಿದೆ.

ಎ ದರ್ಜೆಯಲ್ಲಿ ಪ್ರತ್ಯೇಕ ಕೋಣೆ, ಹಾಸಿಗೆ, ದಿಂಬು, ದಿನಪತ್ರಿಕೆ, ರೇಡಿಯೋ, ಪ್ರತ್ಯೇಕ ಊಟದ ಸ್ಥಳ, ಮನರಂಜನಾ ಸೌಕರ್ಯವಿರುತ್ತದೆ.

You may also like