COVID 19: ರಾಜ್ಯದಲ್ಲಿ ಕೋವಿಡ್ – 19 (COVID 19) ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಶಾಲೆ ಕಾಲೇಜುಗಳು ಆರಂಭವಾಗಲಿದ್ದು, ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನಲೆ ಪರಿಸ್ಥಿತಿಯನ್ನು ಪರಿಶೀಲಿಸಿ ಮುಂದಿನ ಆದೇಶ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾದ ಹಿನ್ನಲೆ ರಾಜ್ಯ ಸರ್ಕಾರವು ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾದ ಹಿನ್ನಲೆ ರಾಜ್ಯ ಸರ್ಕಾರವು ಮೂರರಿಂದ ನಾಲ್ಕು ದಿನಗಳ ನಂತರ ಪರಿಸ್ಥಿತಿಯನ್ನು ಪರಿಶೀಲಿಸಿ ಶಾಲೆಗಳು ಮತ್ತು ಕಾಲೇಜುಗಳನ್ನು ಪುನಃ ತೆರೆಯುವ ಬಗ್ಗೆ ನಿರ್ಧರಿಸಲಿದೆ ಎಂದರು.
ಕೋವಿಡ್ ಹೊಸ ರೂಪಂತರ ತಳಿಯು ಅಷ್ಟೇನೂ ಅಪಾಯಕಾರಿ ಅಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ, ಆದರೆ ಇಂತಹ ಸಮಯದಲ್ಲಿ ಶಾಲೆ ಕಾಲೇಜುಗಳನ್ನು ಒಂದು ವೇಳೆ ತೆರೆದರೆ ಅಪಾಯ ಎದುರಾಗುವ ಸಾದ್ಯತೆ ಇದೆ. ಸಾಮಾನ್ಯವಾಗಿ ಮೇ.29 ರಿಂದ ಶಾಲೆಗಳು ಪುನಾರಂಭಗೊಳ್ಳುತ್ತೆ, ಆದರೆ ಈ ಬಾರಿ ಕೋವಿಡ್ ಸಂಖ್ಯೆ ಹೆಚ್ಚಾದ ಹಿನ್ನಲೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತದೆ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ನಿರ್ಧರಿಸಲಾಗುತ್ತದೆ ಎಂದು ಗುಂಡೂರಾವ್ ತಿಳಿಸಿದರು.
