Madhu Bangarappa: ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ನಡುವೆಯೇ ಬೇಸಿಗೆ ರಜೆ ಮುಗಿದು ಶಾಲೆಗಳ ಪ್ರಾರಂಭವಾಗುತ್ತಿದೆ. ಕೋವಿಡ್ ಹೆಚ್ಚುತ್ತಿರುವ ಕಾರಣ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ಜೊತೆಗೆ ಶಾಲೆ ಕಾಲೇಜುಗಳಿಗೆ ರಜೆ ಇರುತ್ತದೆಯೋ ಇಲ್ಲವೋ ಎಂಬ ಗೊಂದಲವು ಏರ್ಪಟ್ಟಿದೆ. ಈ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲೆಗಳ ರಜೆ ಕುರಿತು ಹೊಸ ಘೋಷಣೆಯೊಂದನ್ನು ಹೊರಡಿಸಿದ್ದಾರೆ.
ಹೌದು, ಇದೀಗ ಪೋಷಕರ ಆತಂಕಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ರಜೆಯ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿವೆ. ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ಅಂತಹವರಿಗೆ ರಜೆ ನೀಡಬೇಕು ಎಂದು ಹೇಳಿದ್ದಾರೆ.
ಅಲ್ಲದೆ ಕೊವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಸದ್ಯ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತ ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ನೀಡಿದರೆ, ಅದನ್ನು ಶಾಲೆಗಳಲ್ಲಿ ಅನುಷ್ಠಾನಕ್ಕೆ ತರುತ್ತೇವೆ ಎಂದಿದ್ದಾರೆ.
ಮತ್ತು ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಯಂತೆ ನಾವೂ ಜಾರಿ ಮಾಡುತ್ತೇವೆ. ಈವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ನೀಡಿಲ್ಲ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವೆಉ ಅಧಿಕಾರುಗಳ ಜೊತೆಗೆ ಸಭೆ ಮಾಡಿ ಅದರಲ್ಲಿಯೇ ಕೆಲವು ಮಾರ್ಗಸೂಚಿಗಳನ್ನ ಸೂಚಿಸಿದ್ದು, ಅದನ್ನ ಪಾಲನೆ ಮಾಡುತ್ತೇವೆ ಎಂದಿದ್ದಾರೆ.
