Home » ಕೋವಿಡ್ ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಸೆಂಟರ್‌ಗೆ ದಾಖಲಿಸಿ | ಸೂಚನೆ ಉಲ್ಲಂಘಿಸಿದರೆ ಎಫ್‌ಐಆರ್ -ದ.ಕ.ಜಿಲ್ಲಾಧಿಕಾರಿ

ಕೋವಿಡ್ ಪಾಸಿಟಿವ್ ಬಂದವರು ಕಡ್ಡಾಯವಾಗಿ ಕೋವಿಡ್ ಸೆಂಟರ್‌ಗೆ ದಾಖಲಿಸಿ | ಸೂಚನೆ ಉಲ್ಲಂಘಿಸಿದರೆ ಎಫ್‌ಐಆರ್ -ದ.ಕ.ಜಿಲ್ಲಾಧಿಕಾರಿ

by Praveen Chennavara
0 comments

ಮುಖ್ಯಮಂತ್ರಿಗಳು ನೀಡಿದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹಾಗೂ ಅದರ ಪಾಸಿಟಿವಿಟಿಯನ್ನು ನಿಯಂತ್ರಿಸುವಂತೆ ಜಿಲ್ಲಾಧಿಕಾರಿ ಡಾ ಕೆ. ವಿ ರಾಜೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಶನಿವಾರ ನಗರದಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಜಿಲ್ಲಾ ಹಾಗೂ ಕಚೇರಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈಗಾಗಲೇ ಸೋ೦ಕಿತರನ್ನು ಕೋವಿಡ್ ಕೇರ್ ಸೆಂಟರ್ ‌ಗೆ
ದಾಖಲಿಸಲಾಗುತ್ತಿದೆ. ಸೋ೦ಕು ತಗಲಿರುವವರು ಸೆಂಟರ್‌ಗೆ
ಹೋಗದೆ ಹೊರಗೆ ಓಡಾಡಿದ್ದಲ್ಲಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಬೇಕು.

ಗರ್ಭಿಣಿಯರಾಗಿದ್ದಲ್ಲಿ ಆಸ್ಪತ್ರೆಗೆ ದಾಖಲಿಸಬೇಕು.ಕೇರ್ ಸೆಂಟರ್‌ಗೆ ದಾಖಲಿಸುವುದರಿಂದ ಏನಾಯಿತಿ ನೀಡಬೇಕಿದ್ದಲ್ಲಿ ಅವರು ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ತಿಳಿದಿರಬೇಕು’ ಎಂದರು.

ಸಂಪರ್ಕಿತರು ಯಾರಾದರೂ ಓಡಾಡುವುದು ಕಂಡುಬಂದಲ್ಲಿ ವಿಡಿಯೋ ಮಾಡಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಪಾಸಿಟಿವ್ ಪ್ರಕರಣಗಳು ಸಂಖ್ಯೆ ಹೆಚ್ಚುತ್ತಿರುವುದರಿಂದ ತಪಾಸಣೆಯನ್ನು ಮತ್ತಷ್ಟು ಹೆಚ್ಚಿಸಬೇಕು, ಪ್ರತಿ ದಿನ 12 ರಿಂದ 15 ಸಾವಿರ ಕೋವಿಡ್ ಟೆಸ್ಟ್‌ಗಳಾಗಬೇಕು, ಭಾನುವಾರ, ಹಬ್ಬದ ದಿನಗಳಲ್ಲಿಯೂ ಇದಕ್ಕೆ ವಿನಾಯಿತಿ ಇಲ್ಲ’ ಎಂದು ಹೇಳಿದರು.

You may also like

Leave a Comment