Home » ಅಪ್ರಾಪ್ತೆಯ ಅತ್ಯಾಚಾರ ಯತ್ನದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ

ಅಪ್ರಾಪ್ತೆಯ ಅತ್ಯಾಚಾರ ಯತ್ನದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ

by Praveen Chennavara
0 comments

ಅಪ್ರಾಪ್ತೆಯ ಅತ್ಯಾಚಾರ ನಡೆಸಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಪೋಕ್ಸೋ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್ ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ನಡೆದಿದೆ.

ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ನಿಜಾಮ್ (26) ಪರಾರಿಯಾಗಿರುವ ಆರೋಪಿ.

ಆರೋಪಿ ನಿಜಾಮ್ ಮೇಲೆ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನದ ಆರೋಪವಿದೆ. ಹೀಗಾಗಿ ಈತನನ್ನು ಪೊಲೀಸರು ಬಂಧಿಸಿ ಠಾಣೆಯ ಸೆಲ್ ನಲ್ಲಿರಿಸಿದ್ದರು. ಆದರೆ ಠಾಣೆಯಲ್ಲಿ ಸಿಬ್ಬಂದಿಗಳು ಇಲ್ಲದ ಸಮಯ ನೋಡಿ ಆರೋಪಿ ನಿಜಾಮ್ ಲಾಕಪ್ ನಿಂದ ಪರಾರಿಯಾಗಿದ್ದಾನೆ.

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಎಸ್ಕೇಪ್ ಆಗಿರುವ ಆರೋಪಿಯನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.

You may also like

Leave a Comment