India – pakistan: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ (India – pakistan) ಸೇನೆ ವೈಮಾನಿಕ ದಾಳಿ ನಡೆಸಿದ ನಂತರ ಇದೀಗ ಪಾಕಿಸ್ತಾನವು ಸೈಬರ್ ವಾರ್ ನಡೆಸುವ ಆತಂಕ ಎದುರಾಗಿದೆ.
ಭಾರತದ ಮೇಲೆ ಪಾಕಿಸ್ತಾನಿ ಹ್ಯಾಕರ್‌ಳ ಕಣ್ಣಿದ್ದು, ಅನೇಕ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಲು ಯತ್ನಿಸುವ ಸಾಧ್ಯತೆ ಇದೆ. ಆದ್ದರಿಂದ ಎಚ್ಚರಿಕೆಯಿಂದಿರಬೇಕು ಎಂದು ಮಂಗಳೂರಿನಲ್ಲಿ ಸೈಬರ್ ತಜ್ಞ ಡಾ.ಅನಂತ ಪ್ರಭು ಹೇಳಿದ್ದಾರೆ.
ಈ ವಿಚಾರವಾಗಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಪಾಕಿಸ್ತಾನಿಯರು ಸರ್ಕಾರಿ ವೆಬ್‌ಸೈಟ್‌ಗಳನ್ನೇ ಗುರಿ ಮಾಡುವ ಸಾಧ್ಯತೆ ಇದೆ. ಭೂ ಸೇನೆ, ನೌಕಾಪಡೆ ಮತ್ತು ವಾಯುಪಡೆ ರೀತಿಯಲ್ಲಿಯೇ ಸೈಬರ್ ವಿಂಗ್ ಕೂಡ ಇದೆ. ಕೃತಕ ಬುದ್ಧಿಮತ್ತೆ ಬಂದಮೇಲೆ ವೈರಸ್ ಸಿದ್ಧಪಡಿಸಿ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಲು ಸುಲಭವಾಗಿದೆ. ಡಾರ್ಕ್ ವೆಬ್ ಮೂಲಕ ಭಾರತದ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡುವ ಆತಂಕವಿದೆ ಎಂದು ಅವರು ಹೇಳಿದ್ದಾರೆ.
ಆದ್ದರಿಂದ ನಾವು ವೆಬ್‌ಸೈಟ್ ಬಳಸುವ ವೇಳೆ ಯಾವ ದೇಶದ ಸರ್ವರ್ ಇದೆ ಎಂಬುದನ್ನು ಕೂಡ ಗಮನಿಸಿಕೊಳ್ಳಬೇಕು. ಶತ್ರು ರಾಷ್ಟ್ರದ ಸರ್ವರ ಇದ್ದರೆ ಅದರ ಮೂಲಕ ದಾಳಿ ಮಾಡುವ ಸಾಧ್ಯತೆ ಹೆಚ್ಚು ಇದೆ. ಈ ಬಗ್ಗೆ ನಾವು ಎಚ್ಚರ ವಹಿಸಬೇಕು ಅವರು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
