Home » Bengaluru : ಫೆಂಗಲ್ ಚಂಡಮಾರುತ ಎಫೆಕ್ಟ್, ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದೆಯೋ ? ಇಲ್ವೋ ?

Bengaluru : ಫೆಂಗಲ್ ಚಂಡಮಾರುತ ಎಫೆಕ್ಟ್, ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದೆಯೋ ? ಇಲ್ವೋ ?

0 comments

Bengaluru : ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಮಳೆಯಾಗಿದೆ. ಕೋಲಾರ ಜಿಲ್ಲೆಯ(Kolara) ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ, ಆದರೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದೆ ಎಂಬುವಂತದ್ದು ರಾಜಧಾನಿಯ ಜನರ ಪ್ರಶ್ನೆಯಾಗಿದೆ.

ಹೌದು, ಬೆಂಗಳೂರು(Bengaluru) ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಹೀಗಾಗಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ಅವರು, ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಹೀಗಾಗಿ ಪೋಷಕರು, ಮಕ್ಕಳನ್ನು ಎಚ್ಚರಿಕೆಯಿಂದ ಶಾಲೆಗೆ ಕಳುಹಿಸಬೇಕು. ನಾಳೆ ಎಂದಿನಂತೆಯೇ ಶಾಲಾ ಕಾಲೇಜುಗಳು ನಡೆಯಲಿವೆ, ರಜೆ ಘೋಷಣೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

You may also like

Leave a Comment