4
Holiday : ಫೆಂಗಲ್ ಚಂಡಮಾರುತ (Cyclone Fengal) ಪ್ರಭಾವದಿಂದ ತಮಿಳುನಾಡು(Tamilunadu )ಮಾತ್ರವಲ್ಲದೇ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದೆ (Karnataka Rain). ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿ.2ರಂದು ಸೋಮವಾರ, ಈ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ(Holiday) ಘೋಷಣೆ ಮಾಡಿದೆ.
ಹೌದು, ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ ಮತ್ತು ವಿಪರೀತ ಚಳಿ ಹಿನ್ನೆಲೆ ಕೋಲಾರ(Kolara )ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಡಿಸಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.
