Home » ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿರಸ್ತೆ ಅಪಘಾತದಲ್ಲಿ ಮೃತ್ಯು

ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿರಸ್ತೆ ಅಪಘಾತದಲ್ಲಿ ಮೃತ್ಯು

by Praveen Chennavara
0 comments

ಹೊಸದಿಲ್ಲಿ: ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ, ಉದ್ಯಮಿ ಸೈರಸ್ ಮಿಸ್ತ್ರಿ(Cyrus Mistry) ರವಿವಾರ ಪಾಲ್ಟರ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಿಸ್ತ್ರಿ ಅವರು ಸಂಚರಿಸುತ್ತಿದ್ದ ಕಾರು ಮಹಾರಾಷ್ಟ್ರದ ಪಾಲ್ಮರ್ ಸಮೀಪ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮಿಸ್ತ್ರಿ ಅವರು ಮರ್ಸಿಡಿಸ್ ಕಾರಿನಲ್ಲಿ ಅಹಮದಾಬಾದ್‌ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಕಾರು ಚಾಲಕ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗುಜರಾತ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶರದ್ ಪವಾರ್ ಪುತ್ರಿ ಸುಪ್ರಿಯಾ ಸುಳೆ ಸೇರಿದಂತೆ ಹಲವು ಉದ್ಯಮಿಗಳು, ರಾಜಕಾರಣಿಗಳು, ಗಣ್ಯರು ಮಿಸ್ತ್ರಿ ಸಾವಿಗೆ ಸಂತಾಪ ಸೂಚಿಸಿದ್ದಾರೆ.

You may also like

Leave a Comment