D. K. Shivakumar: ಕಾಂಗ್ರೆಸ್ ನ (Congress)ಈ ಐದು ಗ್ಯಾರೆಂಟಿಗಳ ಮೂಲಕ ಐತಿಹಾಸಿಕ ಗೆಲುವು ಸಾಧಿಸಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಚುನಾವಣಾ ಪೂರ್ವ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಇದರ ನಡುವೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೂಡ ಭರ್ಜರಿ ಗೆಲುವು ಸಾಧಿಸಲು ಡಿಕೆ ಶಿವಕುಮಾರ್(D. K. Shivakumar)ಸೂಪರ್ ಪ್ಲಾನ್ ಮಾಡಿಕೊಂಡಿದ್ದಾರೆ. ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಭರದ ತಯಾರಿ ಮಾಡಿಕೊಳ್ಳುತ್ತಿವೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಬೆನ್ನಲ್ಲೇ ಕಾಂಗ್ರೆಸ್ ಟಕ್ಕರ್ ನೀಡಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ.ಕಾಂಗ್ರೆಸ್ ಪಂಚ ಗ್ಯಾರಂಟಿ, ಆಪರೇಷನ್ ಹಸ್ತ ತಂತ್ರ ಬಳಸಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ತಿರುಮಂತ್ರ ಕೊಡಲು ಮುಂದಾಗಿದೆ.ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಈ ಮೂಲಕ ಕಾಂಗ್ರೆಸ್ಗೆ ಪೈಪೋಟಿ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿರುವ ಬಿಜೆಪಿ ಜೆಡಿಎಸ್ ಮೈತ್ರಿಗೆ ತಕ್ಕ ತಿರುಗುಬಾಣ ಹೂಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
