DK Shivkumar : ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿದ್ದಾರೆ ಎನ್ನುವ ಪ್ರಕರಣದ ತನಿಖೆ ನಡೆಸಿರುವ ಎಸ್ಐಟಿ ತಂಡವು ಇದೀಗ ಚಾರ್ಜ್ ಶೀಟ್ ಸಲ್ಲಿಸಿದೆ ಎನ್ನಲಾಗಿದೆ. ಇದು ಕ್ಷೇತ್ರದ ವಿರುದ್ಧ ನಡೆಸಿರುವ ಷಡ್ಯಂತ್ರದ ಪಿತೂರಿ ಎಂಬುದಾಗಿ ಎಸ್ಐಟಿ ವರದಿ ಮಾಡಿದೆ ಎಂದು ಕೆಲವು ಮಾಧ್ಯಮಗಳು ತಿಳಿಸಿದ್ದವು. ಈ ನಡುವೆ ಈ ಪ್ರಕರಣದ ಕುರಿತು ಪ್ರತಿಕ್ರಿಯುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ಫೋಟಕ ಹೇಳಿಕೆಯಿಂದನು ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ನನಗೆ ಧರ್ಮಸ್ಥಳದ ಇತಿಹಾಸ ಗೊತ್ತು ಹಾಗೂ ಅವರು ಯಾರೂ ಸಹ ಈ ರೀತಿ ಮಾಡುವುದಿಲ್ಲ ಎನ್ನುವುದೂ ಗೊತ್ತಿತ್ತು. ಆದ ಕಾರಣಕ್ಕೆ ನಾನು ಧೈರ್ಯದಿಂದ ಇದು ಒಂದು ಷಡ್ಯಂತರ ಎಂದು ಹಿಂದೆಯೇ ಹೇಳಿದ್ದೆ. ಚಾರ್ಜ್ ಶೀಟ್ ಪ್ರತಿಯಲ್ಲಿ ಏನಿದೆ ಎಂದು ನಾನು ಓದಿಲ್ಲ. ಸರ್ಕಾರ ಕಾನೂನಿನ ಅಡಿ ಏನು ಕ್ರಮ ತೆಗೆದುಕೊಳ್ಳಬೇಕು ಅದು ನಡೆಯುತ್ತದೆ. ಅಂತಿಮವಾಗಿ ಸತ್ಯ ಹೊರಗಡೆ ಬಂದಿದೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಡುವಿನ ಆಳವಾದ ಭಿನ್ನಾಭಿಪ್ರಾಯಗಳ ಕಾರಣಕ್ಕೆ ಈ ಪಿತೂರಿ ನಡೆದಿದೆ” ಎಂದು ಹೇಳಿದ್ದಾರೆ.
ಅಲ್ಲದೆ ವೀರೇಂದ್ರ ಹೆಗ್ಗಡೆ ಅವರ ಕಷ್ಟಕಾಲದಲ್ಲಿ ನಾನು ತೆಗೆದುಕೊಂಡ ಒಂದು ನಿರ್ಧಾರದಿಂದ ಇಡೀ ದೇಶದ ಜೈನ ಸಮುದಾಯದವರು ನೀವು ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾನು ಯಾವ ಒತ್ತಡಕ್ಕೂ ಮಣಿಯುವುದಿಲ್ಲ, ನನ್ನ ಅನುಭವ ಹಾಗೂ ಏನನ್ನು ತಿಳಿದಿದ್ದೇನೋ ಅದನ್ನು ಹೇಳಿದ್ದೇನೆ ಎಂದು ಹೇಳಿದ್ದೆ. ದೂರದಾರರೇ ಆರೋಪಿಗಳಾಗಿ ಉಲ್ಲೇಖಿಸಿರುವ ಚಾರ್ಜ್ ಶೀಟ್ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದರು. ನಾನು ಏನು ಹೇಳಬೇಕೋ ಅದನ್ನು ನೀವೇ ವ್ಯಾಖ್ಯಾನ ಮಾಡಿ ಎಂದಷ್ಟೇ ಉತ್ತರಿಸಿದ್ದೇನೆ” ಎಂದರು.
