Home » Road accident: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು! ಸ್ಥಳದಲ್ಲಿ ಮೃತಪಟ್ಟ ಚಾಲಕ

Road accident: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು! ಸ್ಥಳದಲ್ಲಿ ಮೃತಪಟ್ಟ ಚಾಲಕ

1 comment
Road accident

ಬೆಂಗಳೂರಿನಲ್ಲಿ ಭೀಕರ ಕಾರಿನ ಅಪಘಾತವೊಂದು ನಡೆದಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ವ್ಯಕ್ತಿಯೋರ್ವರು ಧಾರಣವಾಗಿ ಸಾವನ್ನಪ್ಪಿದ್ದು, ಈ ಘಟನೆಯು ಬೆಂಗಳೂರಿನ ನೈಸ್ ರೋಡ್ ಬಳಿ ನಡೆದಿದೆ.

ಇಂದು ಬೆಳಿಗ್ಗೆ ಬೆಂಗಳೂರಿನ ಮಾಗಡಿ ರಸ್ತೆಯ ನೈಸ್ ರೋಡ್ ಜಂಕ್ಷನ್ ಬಲಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿ ನಿಂತಿದ್ದ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಭೀಕರ ಅಪಘಾತದಿಂದಾಗಿ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನು ಓದಿ: Health Benefits Of Eggs: ಮೊಟ್ಟೆ ತಿನ್ನಲು ಇದು ಸರಿಯಾದ ಸಮಯವಂತೆ !! ಈ ಟೈಮ್ ಗೆ ತಿಂದ್ರೆ ಇಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ

ಮೃತರನ್ನು ಸಂತೋಷ್ ಎಂದು ಗುರುತಿಸಲಾಗಿದ್ದು, ಈತ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯು ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

You may also like

Leave a Comment