Home » School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಜೂನ್ 27 ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ !

School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಜೂನ್ 27 ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ !

0 comments
School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯ ಕಾರಣದಿಂದ, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ನಾಳೆ ಜೂ.27ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಶಾಲೆಗಳಿಗೆ ನಾಳೆ ರಜಾ ದಿನ.
ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. ದಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಈ ಆದೇಶ ಹೊರಡಿಸಿದ್ದಾರೆ.

 

ಜಿಲ್ಲಾಡಳಿತದ ಪ್ರಕಟಣೆ ಹೀಗಿದೆ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ.

1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆಗಳಿಗೆ ದಿನಾಂಕ: 27-06-2024 ರಂದು ರಜೆಯನ್ನು ಘೋಷಿಸಲಾಗಿದೆ.
2) ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ
3) ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
4) ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

5) ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಸಮೀಪ ಹೋಗದಂತೆ ಎಚ್ಚರಿಕೆವಹಿಸುವುದು.
6) ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
7) ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

You may also like

Leave a Comment