4
ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲ ಇದ್ರೋ? ಇರಲಿಲ್ಲವೋ ಪ್ರಶ್ನಿಸಿ ದಾವಣಗೆರೆಯಲ್ಲಿ ವಿಜಯಲಕ್ಷ್ಮೀ ಹೇಳಿಕೆ ನೀಡಿದ್ದರು.
ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮೀ ಅವರ ವಿರುದ್ಧ ನಿಂದನೆಗಳ ಪೋಸ್ಟ್ ಪ್ರಕಟವಾಗುತ್ತಿದೆ. 15 ಇನ್‌ಸ್ಟಾಗ್ರಾಂ ಐಡಿ ಮತ್ತು 150 ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದಾರೆ.
