1
Caste Census: ರಾಜ್ಯದಲ್ಲಿ ಜಾತಿಗಣತಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸೆ.22 ರಿಂದ ಅ.7 ರ ವರೆಗೆ ಸಮೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಭೆ ನಡೆಸಿದ ಸಿಎಂ, ಒಟ್ಟು 15 ದಿನಗಳ ಕಾಲ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಅಕ್ಟೋಬರ್ ಕೊನೆಯ ಒಳಗಾಗಿ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕು. ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಿದ್ದಾರೆ.
