Home » ಮಗಳ ಕತ್ತಿನಲ್ಲಿದ್ದ ಮಾಂಗಲ್ಯವನ್ನೇ ಕಿತ್ತುಹಾಕಿ, ಜುಟ್ಟು ಹಿಡಿದು ಎಳೆದಾಡಿದ ತಂದೆ!!| ತಂದೆಯಿಂದಲೇ ರಕ್ಷಣೆ ಬೇಕೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗಳು |ಅಷ್ಟಕ್ಕೂ ಇದಕ್ಕೆಲ್ಲ ಕಾರಣ?

ಮಗಳ ಕತ್ತಿನಲ್ಲಿದ್ದ ಮಾಂಗಲ್ಯವನ್ನೇ ಕಿತ್ತುಹಾಕಿ, ಜುಟ್ಟು ಹಿಡಿದು ಎಳೆದಾಡಿದ ತಂದೆ!!| ತಂದೆಯಿಂದಲೇ ರಕ್ಷಣೆ ಬೇಕೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಗಳು |ಅಷ್ಟಕ್ಕೂ ಇದಕ್ಕೆಲ್ಲ ಕಾರಣ?

by ಹೊಸಕನ್ನಡ
0 comments

ಇತ್ತೀಚಿಗೆ ನಡೆಯುತ್ತಿರುವ ಕೆಲವು ಘಟನೆಗಳು ಸಿನಿಮಾ ಕಥೆಯನ್ನು ಹೋಲುತ್ತಿರುವುದು ಮಾತ್ರ ನಂಬಲೇಬೇಕಾದ ವಿಷಯ. ಹಾಗೆಯೇ ಇನ್ನೊಂದು ಕಡೆ
ಸಿನಿಮಾ ಕಥೆಯ ಮಾದರಿಯಲ್ಲಿ ಪ್ರೀತಿಸಿ ಮದುವೆಯಾದ ಮಗಳ ತಾಳಿ ಕಿತ್ತು ಹಾಕಿ, ಜುಟ್ಟು ಹಿಡಿದು ಎಳೆದೊಯ್ಯಲು ತಂದೆ ಯತ್ನಿಸಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹರತಲೆ ಗ್ರಾಮದ ಯುವತಿ ಚೈತ್ರಾ ಹಲ್ಲರೆ ಗ್ರಾಮದ ಮಹೇಂದ್ರ ಎಂಬವರನ್ನು ಕಳೆದ ಒಂದೂವರೆ ವರ್ಷದಿಂದ ಪ್ರೀತಿಸಿದ್ದರು. ನಂತರ ಡಿಸೆಂಬರ್ 8 ರಂದು ಮದುವೆಯಾಗಿದ್ದಾರೆ. ನಂತರ ನಂಜನಗೂಡಿನ ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ತಮ್ಮ ವಿವಾಹವನ್ನ ನೊಂದಾಯಿಸಿಕೊಳ್ಳಲು ಬಂದಿದ್ದಾರೆ. ನೋಂದಣಿ ಪ್ರಕ್ರಿಯೆ ಮುಗಿಸಿ ಕಚೇರಿಯಿಂದ ಹೊರ ಬರುತ್ತಿದ್ದಂತೆಯೇ ಯುವತಿ ತಂದೆ ಬಸವರಾಜ ನಾಯ್ಕ್ ಪ್ರತ್ಯಕ್ಷವಾಗಿ ಮಗಳ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಹಾಕಿ ಜುಟ್ಟು ಹಿಡಿದು ಮನೆಗೆ ಕರೆದುಕೊಂಡು ಹೋಗಲು ಯತ್ನಿಸಿದ್ದಾರೆ.

ಈ ವೇಳೆ ಸಾರ್ವವನಿಕರು ಮಧ್ಯೆ ಪ್ರವೇಶಿಸಿ ಯುವತಿಯನ್ನು ರಕ್ಷಿಸಿದ್ದಾರೆ. ನಂತರ ತಂದೆ ಬಸವರಾಜನಾಯ್ಕ ಅನಿವಾರ್ಯವಾಗಿ ಮನೆಗೆ ವಾಪಸಾಗಿದ್ದಾರೆ. ಯುವತಿ ತನ್ನ ತಂದೆಯಿಂದಲೇ ತನಗೆ ರಕ್ಷಣೆ ಬೇಕೆಂದು ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

You may also like

Leave a Comment