2
Davanagere: ಕಾಲೇಜು ವಿದ್ಯಾರ್ಥಿ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವಿಗೀಡಾದ ಘಟನೆ ದಾವಣಗೆರೆಯ ಜಯನಗರದಲ್ಲಿ ನಡೆದಿದೆ.
ಉದ್ಯಮಿ ರೇಖಾ ಮುರ್ಗೇಶ್ ಪುತ್ರ ಅಕ್ಷಯ್ (22) ಮೃತಪಟ್ಟವರು. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೆಲ ಕ್ಷಣಗಳಲ್ಲಿಯೇ ಅಕ್ಷಯ್ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
